ತೀರ್ಥಹಳ್ಳಿ: ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರೊಂದು ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕೆರೆಗೆ ಮುಳುಗಡೆಯಾದ ಘಟನೆ ಗುರುವಾರ ತೀರ್ಥಹಳ್ಳಿ ತಾಲೂಕಿನ ಬಾಳಗಾರು ಸಮೀಪ ಸಂಭವಿಸಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ಈಜಿಕೊಂಡು ದಡ ಸೇರುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
