ಶಿವಮೊಗ್ಗ: ಸಂಯುಕ್ತ ಕಿಸಾನ್ ಮೋರ್ಚಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಕಾರ್ಪೊರೇಟ್ಗಳೇ ದೇಶ ಬಿಟ್ಟು ತೊಲಗಿ ಘೋಷಣೆಯಡಿಯಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ಚಳುವಳಿಯನ್ನು ಆ. 10ರಂದು ಶಿವಪ್ಪನಾಯಕ ವೃತ್ತದಲ್ಲಿ ಹಮ್ಮಿಕೊಂಡಿದೆ.
ಸುದ್ದಿ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಂಟಿ ಸಮಿತಿಯ ಮುಖಂಡರು,
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಎಸ್ ಕೆ ಎಂ-ಜೆಸಿಟಿಯು ಕರೆಯ ಮೇರೆಗೆ ಐತಿಹಾಸಿಕ ಕ್ವಿಟ್ ಇಂಡಿಯಾ ಚಳವಳಿಯ ನೆನಪು ಮತ್ತು ಸ್ಪೂರ್ತಿಯಲ್ಲಿ ದೇಶದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಪ್ರತಿಭಟನೆ ನಡೆಯಲಿದೆ ಎಂದರು.
ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ-ಕಾರ್ಪೊರೇಟ್ ಭೂ ಕಬಳಿಕೆ ವಿರೋಧಿಸಿ, ಕಾರ್ಮಿಕ ವಿರೋಧಿ ಕನಿಷ್ಠ ಕೂಲಿ ಪರಿಷ್ಕರಣಿ ವಿರೋಧಿಸಿ, ವಿಬಿ ಗ್ರಾಮ್ ಜಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ 2025, ಬೀಜ ಕಾಯ್ದೆ, ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ಹಾಗೂ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಲಾಗುವುದು ಎಂದರು.
ಎಂ.ಎಸ್ ಸ್ವಾಮಿನಾಥನ್ ಶಿಫಾರಸ್ಸಿನಂತೆ ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಶಾಸನ, ಎಲ್ಲಾ ರೈತರ-ಕೃಷಿಕೂಲಿಕಾರರ-ಮಹಿಳೆಯರ ಎಲ್ಲಾ ರೀತಿಯ ಸಾಲ ಮನ್ನಾ ಮಾಡಲು ಹಾಗೂ ಋಣ ಮುಕ್ತ ಕಾಯ್ದೆ ಜಾರಿಗೆ ಮತ್ತು ಶಾಸನಬದ್ಧ ಜೀವನಾವಶ್ಯಕ ಕನಿಷ್ಠ ಕೂಲಿ ಶಾಸನಕ್ಕೆ, ಶಾಸನ ಸಭೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹಿಸಲಾಗುವುದು ಎಂದರು. ರಸಗೊಬ್ಬರ-ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೇಲೆ ಹಾಗೂ ಎಲ್ಲಾ ವಲಯಗಳಲ್ಲಿ ಹೆಚ್ಚುತ್ತಿರುವ ಖಾಸಗೀಕರಣ-ಕಾರ್ಪೋರೇಟ್ ಶೋಷಣಿ ಮೇಲೆ ಸೂಕ್ತ ನಿಯಂತ್ರಣ ಹಾಕುವಂತೆ ಹಾಗೂ ಬ್ಯಾಂಕ್, ವಿಮೆ, ಆರೋಗ್ಯ, ಶಿಕ್ಷಣ ಖಾಸಗೀಕರಣ ನಿಲ್ಲಿಸುವಂತೆ ಆಗ್ರಹಿಸಿ, ರಾಜ್ಯಾದಾದ್ಯಂತ ಬರಗಾಲ ಪರಿಹಾರ ಕ್ರಮಗಳಿಗೆ ಒತ್ತಾಯಿಸಲಾಗುವುದೆಂದರು.
, 2025-26ನೇ ಸಾಲಿನ ಬಾಕಿ ಇರುವ ಬೆಳೆ ವಿಮೆ ಪರಿಹಾರ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಮತ್ತು ಜಿಲ್ಲಾ ಮಟ್ಟದಲ್ಲಿ ಕಛೇರಿಗಳನ್ನು ತೆರೆದು ತಕರಾರುಗಳನ್ನ ಇತ್ಯರ್ಥ ಮಾಡುವಂತೆ ಒತ್ತಾಯಿಸಿ, ರೈತರಿಂದ ಎಂ.ಎಸ್.ಪಿ ಬೆಲೆ ಅಡಿಯಲ್ಲಿ ಖರೀದಿ ಮಾಡಿದ ಬೆಳೆಗಳ ಹಣವನ್ನು ರೈತರಿಗೆ ತಕ್ಷಣವೇ ನೀಡುವಂತೆ ಒತ್ತಾಯಿಸಿ, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯನ್ನು 10ಪಟ್ಟು ಹೆಚ್ಚಿಸಿ ಅತೀವೃಷ್ಟಿ-ಅನಾವೃಷ್ಟಿಯಿಂದಾದ ಬೆಳೆ ಹಾನಿ, ಜನ-ಜಾನುವಾರು ಜೀವ ಹಾನಿ ನಷ್ಟಕ್ಕೆ ಪರಿಹಾರ ನೀಡುವುದು, ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ವಾಪಾಸ್ಸು ಪಡೆಯುವುದು ತಮ್ಮ ಬೇಡಿಕೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್ ಆರ್ ಬಸವರಾಜಪ್ಪ, ಕೆ ಎಲ್ ಅಶೋಕ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ರಾಘವೇಂದ್ರ, ಸಿಐಟಿಯುನ ನಾರಾಯಣ, ಹನುಮಮ್ಮ, ಎಇಎಸ್ ಎಸ್ ನ ಶೇಷಪ್ಪ , ಭಾಗ್ಯ ರಾಘವೇಂದ್ರ ಮೊದಲಾದವರಿದ್ದರು.
*ಆ. 10: ಸಂಯುಕ್ತ ಕಿಸಾನ್ ಮೋರ್ಛಾದಿಂದ ಪ್ರತಿಭಟನೆ, ರಸ್ತೆ ತಡೆ ಚಳವಳಿ*
ಶಿವಮೊಗ್ಗ: ಸಂಯುಕ್ತ ಕಿಸಾನ್ ಮೋರ್ಚಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಕಾರ್ಪೊರೇಟ್ಗಳೇ ದೇಶ ಬಿಟ್ಟು ತೊಲಗಿ ಘೋಷಣೆಯಡಿಯಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ಚಳುವಳಿಯನ್ನು ಆ. 10ರಂದು ಶಿವಪ್ಪನಾಯಕ ವೃತ್ತದಲ್ಲಿ ಹಮ್ಮಿಕೊಂಡಿದೆ.
ಸುದ್ದಿ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಂಟಿ ಸಮಿತಿಯ ಮುಖಂಡರು,
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಎಸ್ ಕೆ ಎಂ-ಜೆಸಿಟಿಯು ಕರೆಯ ಮೇರೆಗೆ ಐತಿಹಾಸಿಕ ಕ್ವಿಟ್ ಇಂಡಿಯಾ ಚಳವಳಿಯ ನೆನಪು ಮತ್ತು ಸ್ಪೂರ್ತಿಯಲ್ಲಿ ದೇಶದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಪ್ರತಿಭಟನೆ ನಡೆಯಲಿದೆ ಎಂದರು.
ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ-ಕಾರ್ಪೊರೇಟ್ ಭೂ ಕಬಳಿಕೆ ವಿರೋಧಿಸಿ, ಕಾರ್ಮಿಕ ವಿರೋಧಿ ಕನಿಷ್ಠ ಕೂಲಿ ಪರಿಷ್ಕರಣಿ ವಿರೋಧಿಸಿ, ವಿಬಿ ಗ್ರಾಮ್ ಜಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ 2025, ಬೀಜ ಕಾಯ್ದೆ, ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ಹಾಗೂ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಲಾಗುವುದು ಎಂದರು.
ಎಂ.ಎಸ್ ಸ್ವಾಮಿನಾಥನ್ ಶಿಫಾರಸ್ಸಿನಂತೆ ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಶಾಸನ, ಎಲ್ಲಾ ರೈತರ-ಕೃಷಿಕೂಲಿಕಾರರ-ಮಹಿಳೆಯರ ಎಲ್ಲಾ ರೀತಿಯ ಸಾಲ ಮನ್ನಾ ಮಾಡಲು ಹಾಗೂ ಋಣ ಮುಕ್ತ ಕಾಯ್ದೆ ಜಾರಿಗೆ ಮತ್ತು ಶಾಸನಬದ್ಧ ಜೀವನಾವಶ್ಯಕ ಕನಿಷ್ಠ ಕೂಲಿ ಶಾಸನಕ್ಕೆ, ಶಾಸನ ಸಭೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹಿಸಲಾಗುವುದು ಎಂದರು.
ರಸಗೊಬ್ಬರ-ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೇಲೆ ಹಾಗೂ ಎಲ್ಲಾ ವಲಯಗಳಲ್ಲಿ ಹೆಚ್ಚುತ್ತಿರುವ ಖಾಸಗೀಕರಣ-ಕಾರ್ಪೋರೇಟ್ ಶೋಷಣಿ ಮೇಲೆ ಸೂಕ್ತ ನಿಯಂತ್ರಣ ಹಾಕುವಂತೆ ಹಾಗೂ ಬ್ಯಾಂಕ್, ವಿಮೆ, ಆರೋಗ್ಯ, ಶಿಕ್ಷಣ ಖಾಸಗೀಕರಣ ನಿಲ್ಲಿಸುವಂತೆ ಆಗ್ರಹಿಸಿ, ರಾಜ್ಯಾದಾದ್ಯಂತ ಬರಗಾಲ ಪರಿಹಾರ ಕ್ರಮಗಳಿಗೆ ಒತ್ತಾಯಿಸಲಾಗುವುದೆಂದರು.
,
2025-26ನೇ ಸಾಲಿನ ಬಾಕಿ ಇರುವ ಬೆಳೆ ವಿಮೆ ಪರಿಹಾರ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಮತ್ತು ಜಿಲ್ಲಾ ಮಟ್ಟದಲ್ಲಿ ಕಛೇರಿಗಳನ್ನು ತೆರೆದು ತಕರಾರುಗಳನ್ನ ಇತ್ಯರ್ಥ ಮಾಡುವಂತೆ ಒತ್ತಾಯಿಸಿ, ರೈತರಿಂದ ಎಂ.ಎಸ್.ಪಿ ಬೆಲೆ ಅಡಿಯಲ್ಲಿ ಖರೀದಿ ಮಾಡಿದ ಬೆಳೆಗಳ ಹಣವನ್ನು ರೈತರಿಗೆ ತಕ್ಷಣವೇ ನೀಡುವಂತೆ ಒತ್ತಾಯಿಸಿ, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯನ್ನು 10ಪಟ್ಟು ಹೆಚ್ಚಿಸಿ ಅತೀವೃಷ್ಟಿ-ಅನಾವೃಷ್ಟಿಯಿಂದಾದ ಬೆಳೆ ಹಾನಿ, ಜನ-ಜಾನುವಾರು ಜೀವ ಹಾನಿ ನಷ್ಟಕ್ಕೆ ಪರಿಹಾರ ನೀಡುವುದು, ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ವಾಪಾಸ್ಸು ಪಡೆಯುವುದು ತಮ್ಮ ಬೇಡಿಕೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್ ಆರ್ ಬಸವರಾಜಪ್ಪ, ಕೆ ಎಲ್ ಅಶೋಕ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ರಾಘವೇಂದ್ರ, ಸಿಐಟಿಯುನ ನಾರಾಯಣ, ಹನುಮಮ್ಮ, ಎಇಎಸ್ ಎಸ್ ನ ಶೇಷಪ್ಪ , ಭಾಗ್ಯ ರಾಘವೇಂದ್ರ ಮೊದಲಾದವರಿದ್ದರು.
