ಜನ ನೋಟ
ಕ್ರೈಂ ನ್ಯೂಸ್

ಶಾಲೆಯಲ್ಲಿ ಹಾವು ಕಚ್ಚಿ ಮೂವರು ಬಾಲಕಿಯರು ಸಾವು

ವರದಿ: ಸನತ್ ಶಿವಮೊಗ್ಗ 

Screenshot

ಮಹಾರಾಷ್ಟ್ರ : ವಿಷಕಾರಿ ಹಾವು ಕಚ್ಚಿ ಮೂವರು ಬುಡಕಟ್ಟು ಬಾಲಕಿಯರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ ತಾಲೂಕಿನ ಜಪಟ್ಲೈ ವಸತಿ ಶಾಲೆಯಲ್ಲಿ ಸಂಭವಿಸಿದೆ.

ರಾತ್ರಿ ಮಲಗಿದ್ದಾಗ ಒಟ್ಟು ಆರು ಮಕ್ಕಳಿಗೆ ಹಾವು ಕಚ್ಚಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಉಳಿದ ಬಾಲಕಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಬೆಳಗಿನ ಜಾವ 2ರಿಂದ 2:30ರ ನಡುವೆ ಹಾವು ಕಚ್ಚಿರುವ ಕುರಿತು ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದು ಶಾಲಾ ಆಡಳಿತ ಮಂಡಳಿಯು ತಕ್ಷಣ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿದೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ 6 ಮತ್ತು 8ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಫಲಿಸದೆ ಮೃತಪಟ್ಟರೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 2ನೇ ತರಗತಿಯ ಮತ್ತೋರ್ವ ವಿದ್ಯಾರ್ಥಿನಿಯೂ ಅಸುನೀಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಶಿವಮೊಗ್ಗದ ಹಾರನಹಳ್ಳಿ ಬಳಿ ಕಟ್ಟಿದ್ದ ನಾಯಿಯನ್ನು ಕೊಂದು ಎಳೆದೊಯ್ದ ಚಿರತೆ:ಗ್ರಾಮಸ್ಥರಲ್ಲಿ ಆತಂಕ

JanaNota Editor

ತಾತನನ್ನೇ ಕೊಲೆ ಮಾಡಿಸಿದ 13 ವರ್ಷದ ಬಾಲಕಿ!

JanaNota Editor

ಸಾಗರ ಬಸ್ಸಿನಲ್ಲಿ ಗಾಢ ನಿದ್ರೆಗೆ ಜಾರಿದ ಮಹಿಳೆ: 17 ಲಕ್ಷ ರೂ. ಮೌಲ್ಯದ ಆಭರಣ ಕಳ್ಳತನ

JanaNota Editor