ಗದಗ: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಸಣ್ಣ ಅವಘಡ ಸಂಭವಿಸಿದೆ.
ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ‘ವಂದೇ ಮಾತರಂ’ ಗೀತೆಗೆ ಕಾಂಗ್ರೆಸ್ ನಾಯಕರು ಅಗೌರವ ತೋರಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ರಸ್ತೆ ಮಧ್ಯೆ ಟೈರ್‌ಗೆ ಬೆಂಕಿ ಹಚ್ಚಲು ಮುಂದಾದರು.
ಈ ವೇಳೆ ಪೊಲೀಸರು ಟೈರ್ ವಶಕ್ಕೆ ಪಡೆಯಲು ಮುಂದಾದಾಗ ನೂಕಾಟ ಉಂಟಾಗಿದೆ. ಕಾರ್ಯಕರ್ತರು ಏಕಾಏಕಿ ಮುನ್ನುಗ್ಗಿದ ಸಂದರ್ಭದಲ್ಲಿ ಓರ್ವ ಕಾರ್ಯಕರ್ತನ ಪ್ಯಾಂಟ್‌ಗೆ ಬೆಂಕಿ ತಗುಲಿದೆ
ಅದೃಷ್ಟವಶಾತ್ ಬೆಂಕಿ ಅಲ್ಪ ಪ್ರಮಾಣದಲ್ಲಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಪ್ರತಿಭಟನೆ ವೇಳೆ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
