ಜನ ನೋಟ
ಶಿವಮೊಗ್ಗ

ಭದ್ರಾ ಮುಂಗಾರು ನೀರು: ಸಿಎಂ ಜೊತೆ ಸಮಾಲೋಚಿಸಿ ಅಂತಿಮ ನಿರ್ಧಾರ

ಬೆಂಗಳೂರು : ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆ ವಿಕಾಸಸೌಧದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮಲೆನಾಡು ಹಾಗೂ ಜಲಾನಯನ ಪ್ರದೇಶಗಳ ಮಳೆಯ ಪರಿಸ್ಥಿತಿ, ಭದ್ರಾ ಜಲಾಶಯದ ನೀರಿನ ಸಂಗ್ರಹ ಹಾಗೂ ಮುಂಗಾರು ಬೆಳೆಗಳಿಗೆ ಅಗತ್ಯವಿರುವ ನೀರಿನ ಪ್ರಮಾಣದ ಕುರಿತು ಚರ್ಚಿಸಲಾಯಿತು.

ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶೀಘ್ರ ಸಮಾಲೋಚನೆ ನಡೆಸಿ, ಕಾಲಮಿತಿಯೊಳಗೆ ನೀರು ಹರಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಕೆ.ಎಸ್. ಬಸವಂತಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್, ಡಿ.ಜಿ. ಶಾಂತನಗೌಡ, ಬಲ್ಕೀಷ್ ಬಾನು, ಮಾಜಿ ಶಾಸಕರು, ರೈತ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಈದ್ ಮಿಲಾದ್ ಆಚರಣೆ ವೇಳೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

JanaNota Editor

ಶಿವಮೊಗ್ಗಕ್ಕೆ ಕಿಯಾ ಸೊರೆಂಟೊ ಎಂಟ್ರಿ : ಸೆ.8ರಂದು ಭರ್ಜರಿ ಪ್ರಿ-ಲಾಂಚ್

JanaNota Editor

ರಾಷ್ಟ್ರಭಕ್ತರ ಬಳಗದ ಚಟುವಟಿಕೆಗೆ ಶಾಸಕ ಚನ್ನಬಸಪ್ಪ ಅಸಮಾಧಾನ

JanaNota Editor