ಹೈದರಾಬಾದ್: ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್‌ಟಿಆರ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರಕ್ಕೆ ‘ಡ್ರ್ಯಾಗನ್’ ಎಂಬ ಶೀರ್ಷಿಕೆ ಅಧಿಕೃತಗೊಂಡಿದ್ದು, ಚಿತ್ರದ ಹೊಸ ಪೋಸ್ಟರ್ ಸಿನಿಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ.
‘ಮ್ಯಾನ್ ಆಫ್ ಮಾಸಸ್’, ‘ಹಿಸ್ ರೀನ್… ಹಿಸ್ ಸಾಯಿಲ್…’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಬಿಡುಗಡೆಯಾದ ಪೋಸ್ಟರ್‌ನಲ್ಲಿ ಜೂನಿಯರ್ ಎನ್‌ಟಿಆರ್ ಅವರನ್ನು ರಗಡ್ ಹಾಗೂ ತೀವ್ರ ಸ್ವರೂಪದಲ್ಲಿ ಪರಿಚಯಿಸಲಾಗಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್, ಎನ್‌ಟಿಆರ್ ಆರ್ಟ್ಸ್ ಹಾಗೂ ಟಿ-ಸೀರೀಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿವೆ.
ಆರಂಭದಲ್ಲಿ 2026ರ ಜೂನ್‌ನಲ್ಲಿ ಚಿತ್ರ ತೆರೆಗೆ ಬರಲಿದೆ ಎನ್ನಲಾಗಿತ್ತು. ಇದೀಗ ಚಿತ್ರತಂಡ 2027ರ ಜೂನ್ 11ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಚಿತ್ರದ ಮೊದಲ ಝಲಕ್ ಈಗಾಗಲೇ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.
ಪ್ರಶಾಂತ್ ನೀಲ್ ಅವರ ಸಿಗ್ನೇಚರ್ ಆಕ್ಷನ್ ಶೈಲಿ ಹಾಗೂ ಜೂನಿಯರ್ ಎನ್‌ಟಿಆರ್ ಅವರ ಮಾಸ್ ಇಮೇಜ್ ಒಂದಾಗಿರುವುದರಿಂದ ‘ಡ್ರ್ಯಾಗನ್’ ಈಗಾಗಲೇ ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಗೆ ಸೇರ್ಪಡೆಯಾಗಿದೆ.
