ಜನ ನೋಟ
ಶಿವಮೊಗ್ಗ

ಶಿವಮೊಗ್ಗದಲ್ಲಿ ಆ.21ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 21ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಖಾಲಿ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

18ರಿಂದ 30 ವರ್ಷದೊಳಗಿನ ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರವಾಗಿ ಹಾಜರಾಗಬೇಕು. ಸಂದರ್ಶನಕ್ಕೆ ಯಾವುದೇ ಶುಲ್ಕ ಇರುವುದಿಲ್ಲ.

ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.

ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Related posts

ಬ್ಯಾಂಕ್ ಮುಷ್ಕರದ ನಡುವೆ ಗ್ರಾಹಕರಿಗೆ ಬಿಗ್ ರಿಲೀಫ್; ಎಟಿಎಂ ವಹಿವಾಟು ಶುಲ್ಕ ಸಂಪೂರ್ಣ ರದ್ದು, ಎಷ್ಟು ಬಾರಿಯಾದರೂ ಉಚಿತವಾಗಿ ಹಣ ಡ್ರಾ ಮಾಡಿ

JanaNota Editor

ಭದ್ರಾವತಿಯಲ್ಲಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ನಕಲಿ ಪೊಲೀಸರು ಅರೆಸ್ಟ್ : ₹4.35 ಲಕ್ಷದ ಚಿನ್ನ ವಶ

JanaNota Editor

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ₹799.20 ಕೋಟಿ ಅಕ್ರಮ ಆರೋಪ: ಸಿಬಿಐ, ಇಡಿ ತನಿಖೆಗೆ ಆರಗ ಜ್ಞಾನೇಂದ್ರ ಆಗ್ರಹ

JanaNota Editor