ಜನ ನೋಟ
ಶಿವಮೊಗ್ಗ

ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್.ಪಿ.

ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ಡಾ. ಮೈತ್ರಿ ಹೆಚ್.ಪಿ.ಎಸ್., ಕೆ.ಎ.ಎಸ್. (ಕಿರಿಯ ಶ್ರೇಣಿ) ಅವರನ್ನು ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ (ಬಿ.ಬಿ.ಎಂ.ಪಿ.-7) ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ ಶಿವಮೊಗ್ಗದ ಪ್ರಸ್ತುತ ಉಪವಿಭಾಗಾಧಿಕಾರಿ ಜಿ.ಹೆಚ್. ಸತ್ಯನಾರಾಯಣ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

Related posts

ವೀರ ಸಾವರ್ಕರ್ ಹಿಂದೂ ಸಂಘಟನಾ ಮಹಾಮಂಡಳಿ; ಸೆ. 14ರಿಂದ 82ನೇ ಗಣೇಶೋತ್ಸವ

JanaNota Editor

ಬಡ ವಿದ್ಯಾರ್ಥಿಗಳಿಗೆ ₹10 ಕೋಟಿ ವಿದ್ಯಾರ್ಥಿವೇತನ ಕೊಡಿಸಿದ ಶಿಕ್ಷಕನಿಗೆ ರಾಷ್ಟ್ರೀಯ ಪ್ರಶಸ್ತಿ

JanaNota Editor

ತೀರ್ಥಹಳ್ಳಿ ಮತದಾರರ ಪಟ್ಟಿ ವಿಚಾರ : ಬಿಜೆಪಿ ಮುಖಂಡರ ದೂರಿಗೆ ಕಾಂಗ್ರೆಸ್ ಆಕ್ಷೇಪ

JanaNota Editor