ಜನ ನೋಟ
ಶಿವಮೊಗ್ಗ

ಶಿಕಾರಿಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಶಿಕಾರಿಪುರ: ಅಕ್ರಮ ಗೋ ಸಾಗಾಣಿಕೆ ಹಾಗೂ ಬಜರಂಗದಳ ಕಾರ್ಯಕರ್ತನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದ್ದ ಶಿಕಾರಿಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬುಧವಾರ (ಆ.19) ಬೆಳಗ್ಗೆಯಿಂದಲೇ ಪಟ್ಟಣದ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿದ ವರ್ತಕರು ಬಂದ್‌ಗೆ ಬೆಂಬಲ ಸೂಚಿಸಿದರು. ಬಂದ್ ಹಿನ್ನೆಲೆಯಲ್ಲಿ ಶಿಕಾರಿಪುರ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಖಾಸಗಿ ಬಸ್ ನಿಲ್ದಾಣದ ಬಳಿ ಜಮಾಯಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರು.

Related posts

ಶಿವಮೊಗ್ಗ: ಹಣ ಕಡಿತ, ದೂರು ನಿರ್ಲಕ್ಷ್ಯ: ಯೂನಿಯನ್ ಬ್ಯಾಂಕ್‌ಗೆ ಬಡ್ಡಿ ಸಮೇತ ಪಾವತಿ ಆದೇಶ

JanaNota Editor

ನಾಗೇಂದ್ರಗೆ ಕನಕಾಭಿಷೇಕ ಮಾಡುವ ಮೂಲಕ ಭ್ರಷ್ಟಾಚಾರ ಮುಚ್ಚಿಹಾಕಲಾಗುತ್ತಿದೆ: ಎಸ್.ಎನ್.ಚನ್ನಬಸಪ್ಪ

JanaNota Editor

ಶೋಷಿತರ ಬದುಕಿಗೆ ಬೆಳಕಾದ ಡಿ. ದೇವರಾಜ ಅರಸು

JanaNota Editor