ಜನ ನೋಟ
ಶಿವಮೊಗ್ಗ

ಭದ್ರಾವತಿ ಸಮೀಪ ಅಡಿಕೆ ತೋಟಕ್ಕೆ ನುಗಿದ್ದ ಬಸ್ : ಓರ್ವ ಸಾವು

ವರದಿ: ಸನತ್ ಶಿವಮೊಗ್ಗ 

 

ಶಿವಮೊಗ್ಗ: ಖಾಸಗಿ ಬಸ್ಸೊಂದು ಬೈಕ್ಗೆ ಡಿಕ್ಕಿ ತಪ್ಪಿಸಲುಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆತೋಟಕ್ಕೆ ನುಗ್ಗಿದ ಘಟನೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆಸಮೀಪ ನಡೆದಿದೆ.

ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು ಆತನನ್ನು

Screenshot

ಬೈಕ್ ಸವಾರ ರಾಜಪ್ಪ(44) ಎಂದು ಗುರುತಿಸಲಾಗಿದೆ.
ಅಲ್ಲದೆ ಅಪಘಾತದಲ್ಲಿ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚುಪ್ರಯಾಣಿಕರು ಗಾಯಗೊಂಡಿದ್ದಾರೆ.

ಖಾಸಗಿ ಬಸ್ ಭದ್ರಾವತಿಯಿಂದ ಚನ್ನಗಿರಿ ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಅಡ್ಡ ಬಂದಿದ್ದ ಬೈಕ್ ಸವಾರನನ್ನುತಪ್ಪಿಸಲು ಹೋಗಿ ಬಸ್ಚಾಲಕ ನಿಯಂತ್ರಣ ತಪ್ಪಿ ಬೈಕ್ಗೆಡಿಕ್ಕಿಯಾಗಿ ರಸ್ತೆ ಬದಿ ಇದ್ದ ಅಡಿಕೆ ತೋಟಕ್ಕೆ ನುಗ್ಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆಧಾವಿಸಿ ಬಸ್ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆಯಲುನೆರವಾಗಿದ್ದಾರೆ.
ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ತಕ್ಷಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ದೃಢಪಡಿಸಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ಶಿವಮೊಗ್ಗ
ಹಾಗೂ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗಿದೆ. ಗಂಭೀರ ಗಾಯಗೊಂಡ ಬಾಲಕನೋರ್ವನನ್ನು ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ದೊರೆತ ತಕ್ಷಣ ಭದ್ರಾವತಿಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿಪರಿಶೀಲನೆ ನಡೆಸಿದ್ದಾರೆ.

Related posts

ಆ.23ರಂದು ಅಖಿಲ ಕರ್ನಾಟಕ ಮೂರನೇ ಗಜಲ್ ಸಮ್ಮೇಳನ

JanaNota Editor

ಈರುಳ್ಳಿ ಬೆಲೆ ಗಗನಕ್ಕೆ: ಗೌರಿ-ಗಣೇಶ ಹಬ್ಬದ ವೇಳೆ ಕೆಜಿಗೆ 100 ರೂ.ಗೆ ಏರಿಕೆ ಸಾಧ್ಯತೆ

JanaNota Editor

ಆ.16ರಂದು ವೀರಶೈವ ಲಿಂಗಾಯತ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

JanaNota Editor