ಜನ ನೋಟ
ಶಿವಮೊಗ್ಗ

ಹೊಳೆಹೊನ್ನೂರು : ಹೊಸ ಮಿಷನ್ ಟ್ರಯಲ್ ವೇಳೆ ದುರಂತ: ವಿದ್ಯುತ್ ಶಾಕ್‌ಗೆ ಪೇಂಟರ್ ಸಾವು

ಹೊಳೆಹೊನ್ನೂರು: ಹೊಸದಾಗಿ ಖರೀದಿಸಿದ್ದ ವಾಲ್ ಕೇರ್ ಪುಟ್ಟಿ (ಲಪ್ಪ)  ಮಿಷನ್ ಅನ್ನು ಮನೆಯಲ್ಲಿ ಪರೀಕ್ಷಿಸಲು ಮುಂದಾದ ಪೇಂಟರ್‌ವೊಬ್ಬರು ವಿದ್ಯುತ್ ಶಾಕ್‌ಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಹೊಳೆಹೊನ್ನೂರು ಸಮೀಪದ ಯಡೇಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಶಾರುಖ್ ಖಾನ್ (26) ಎಂದು ಗುರುತಿಸಲಾಗಿದೆ. ಪೇಂಟಿಂಗ್ ವೃತ್ತಿ ಮಾಡಿಕೊಂಡಿದ್ದ ಅವರು, ವಾಲ್ ಕೇರ್ ಪುಟ್ಟಿ ಉಜ್ಜುವ ಹೊಸ ಮಿಷನ್ ಖರೀದಿಸಿದ್ದರು. ಮನೆಯಲ್ಲಿ ಮಿಷನ್‌ಗೆ ವಿದ್ಯುತ್ ಸಂಪರ್ಕ ನೀಡಿ ಟ್ರಯಲ್ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ.

ತೀವ್ರ ಅಸ್ವಸ್ಥಗೊಂಡ ಶಾರುಖ್ ಅವರನ್ನು ಕುಟುಂಬಸ್ಥರು ಹಾಗೂ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಆಸ್ಪತ್ರೆ ತಲುಪುವ ಮುನ್ನವೇ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಮೃತ ಶಾರುಖ್‌ಗೆ ಸುಮಾರು ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿ ಹಾಗೂ ಎರಡು ವರ್ಷದ ಹೆಣ್ಣು ಮಗು ಮತ್ತು ಎರಡು ತಿಂಗಳ ಗಂಡು ಮಗು ಇದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಸೆ.29ರಂದು ಕೆಎಸ್‌ಸಿಎ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ : ಡಿ.ಎಸ್. ಅರುಣ್

JanaNota Editor

ಶಿವಮೊಗ್ಗದ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟ : ಹಿರಿಯ ಪತ್ರಕರ್ತ ಭಂಡಿಗಡಿ ನಂಜುಂಡಪ್ಪ ನಿಧನ

JanaNota Editor

ಶಿವಮೊಗ್ಗದಲ್ಲಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ : ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲಿ–ಬಿಇಒ ರಮೇಶ್

JanaNota Editor