ಜನ ನೋಟ
ರಾಜ್ಯ

ಚಿತ್ರದುರ್ಗ : ಪ್ರವಾಸಿ ಬಸ್ ಪಲ್ಟಿ : ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಜನರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಹಿರಿಯೂರಿನ ಐಮಂಗಲ ಬಳಿ ಈ ಅಪಘಾತ ಸಂಭವಿಸಿದೆ.

ಮೃತರು ಬೆಂಗಳೂರಿನ ಯೂನಿವರ್ಸಲ್ ಕಾಲೇಜಿನ ಮೂರನೇ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು. ವಿದ್ಯಾರ್ಥಿಗಳು ಆಗಸ್ಟ್ 16ರಂದು ಪ್ರವಾಸಕ್ಕಾಗಿ ಗೋವಾಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಗೋವಾದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಶುಕ್ರವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಇತರ 20 ಜನರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.l

Related posts

ಅಕ್ರಮ ಅಡಿಕೆ ಆಮದು ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಅಮಿತ್ ಶಾಗೆ ಮನವಿ

JanaNota Editor

ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿಯ ಬಂಧನ

JanaNota Editor

ಶಾಲೆಯಲ್ಲಿ ಬಿಸಿಯೂಟ ಸೇವಿಸುತ್ತಿದ್ದ 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

JanaNota Editor