ಜನ ನೋಟ
ರಾಜ್ಯ

ಬೈಂದೂರು ಕರಾವಳಿ ಅಭಿವೃದ್ಧಿಗೆ ‘ಸಾಗರಮಾಲಾ’ ಯೋಜನೆ: ಪರಿಹಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಬೆಂಗಳೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ‘ಸಾಗರಮಾಲಾ’ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಹಾಗೂ ಕಿರಿಮಂಜೇಶ್ವರ ಸಮುದ್ರ ದುರಂತದಲ್ಲಿ ಮೃತಪಟ್ಟ ಯುವಕರ ಕುಟುಂಬಗಳಿಗೆ ಗರಿಷ್ಠ ಪರಿಹಾರ ನೀಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯದ ಬಂದರು ಮತ್ತು ಮೀನುಗಾರಿಕೆ ಸಚಿವ ಬಸವಂತಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದ ಸಂಸದರು, ಈ ಸಂಬಂಧ ಎರಡು ಪ್ರಮುಖ ಮನವಿಗಳನ್ನು ಸಲ್ಲಿಸಿದರು.

ದುರಂತ ಸಂತ್ರಸ್ತ ಕುಟುಂಬಗಳಿಗೆ ವಿಶೇಷ ಪರಿಹಾರ

ಕಿರಿಮಂಜೇಶ್ವರ ಸಮುದ್ರ ದುರಂತದಲ್ಲಿ ಮೃತಪಟ್ಟ ಆಶೀಶ್, ಸೂರಜ್ ಹಾಗೂ ಸಂಕೇತ್ ಅವರ ಕುಟುಂಬಗಳ ಪರಿಸ್ಥಿತಿಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸುವಂತೆ ಮನವಿ ಮಾಡಲಾಗಿದೆ.

‘ಮೀನುಗಾರಿಕಾ ಸಂಕಷ್ಟ ಪರಿಹಾರ ನಿಧಿ’ಯಿಂದ ಮೃತ ಯುವಕರ ಕುಟುಂಬಗಳಿಗೆ ಗರಿಷ್ಠ ಪರಿಹಾರ ಒದಗಿಸುವಂತೆ ಸಂಸದರು ಒತ್ತಾಯಿಸಿದ್ದಾರೆ.

ಬೈಂದೂರು ಕರಾವಳಿ ಅಭಿವೃದ್ಧಿಗೆ ಸಾಗರಮಾಲಾ ಯೋಜನೆ

ಬೈಂದೂರು ಕರಾವಳಿ ಪ್ರದೇಶದ ಅಭಿವೃದ್ಧಿಗಾಗಿ ಸಾಗರಮಾಲಾ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ.

ಮಡಿಕಲ್‌ನಲ್ಲಿ ಹೊರಬಂದರು ನಿರ್ಮಾಣ, ಗಂಗೊಳ್ಳಿ, ಕೋಡೇರಿ ಹಾಗೂ ಮರವಂತೆ ಬಂದರುಗಳ ಉನ್ನತೀಕರಣ, ಜೆಟ್ಟಿ ವಿಸ್ತರಣೆ, ಮರವಂತೆ ಬೀಚ್ ಅಭಿವೃದ್ಧಿ ಹಾಗೂ ಹೂಳೆತ್ತುವ ಕಾಮಗಾರಿಗಳಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕೋರಲಾಗಿದೆ.

ಸಂಸದ ಬಿ.ವೈ. ರಾಘವೇಂದ್ರ ಅವರ ಮನವಿಗೆ ಸಚಿವ ಬಸವಂತಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Related posts

ಶಿವಮೊಗ್ಗ ಗ್ರಾಮಾಂತರದ ಕೆರೆಗಳಿಗೆ ಕೊಳವೆ ಮಾರ್ಗದ ಮೂಲಕ ನೀರು : ₹22.42 ಕೋಟಿ ಯೋಜನೆಗೆ ತುರ್ತು ಅನುಮೋದನೆಗೆ ಮನವಿ

JanaNota Editor

ಕಸ ಗುಡಿಸಲು ಫಾರ್ಚುನರ್‌ ಕಾರಿನಲ್ಲಿ ಬರುವ ಪೌರ ಕಾರ್ಮಿಕ

JanaNota Editor

ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

JanaNota Editor