ಜನ ನೋಟ
ರಾಜ್ಯ

ಓಂ ಪ್ರಕಾಶ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

ಬೆಂಗಳೂರು : ಸ್ಯಾಂಡಲ್‌ವುಡ್ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ವಿರುದ್ಧ ₹3.85 ಕೋಟಿ ವಂಚನೆ ಆರೋಪದಡಿ ದೂರು ಸಲ್ಲಿಸಲಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಟ ಭಾಸ್ಕರ ಶೆಟ್ಟಿ ದೂರು ನೀಡಿದ್ದಾರೆ.

ಫಿನಿಕ್ಸ್ ಸಿನಿಮಾಗಾಗಿ ಮೂರು ವರ್ಷಗಳ ಹಿಂದೆ ಪಡೆದ ಸಾಲವನ್ನು ಇದುವರೆಗೆ ಮರುಪಾವತಿಸಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಾಲ ವಾಪಸ್ ಕೇಳಿದಾಗ ಬೆದರಿಕೆ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಭಾಸ್ಕರ ಶೆಟ್ಟಿ ಅವರ ದೂರಿನ ಆಧಾರದ ಮೇಲೆ ಓಂ ಪ್ರಕಾಶ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ತಿಳಿದುಬರಬೇಕಿದೆ.

Related posts

ಅ.13ರಂದು ನಟ ಪ್ರಭುದೇವರಿಂದ ಯುವ ದಸರಾ ಉದ್ಘಾಟನೆ

JanaNota Editor

ರಾಜ್ಯದ 43.81 ಲಕ್ಷ ಮತದಾರರ ಸ್ಥಿತಿ ಅತಂತ್ರ : ಚುನಾವಣಾ ಆಯೋಗದಿಂದ ನೋಟಿಸ್

JanaNota Editor

ಬೈಂದೂರು ಕರಾವಳಿ ಅಭಿವೃದ್ಧಿಗೆ ‘ಸಾಗರಮಾಲಾ’ ಯೋಜನೆ: ಪರಿಹಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮನವಿ

JanaNota Editor