ಜನ ನೋಟ
ಶಿವಮೊಗ್ಗ

ಜಿಲ್ಲಾವಾರು ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೃಷಿ ಮತ್ತು ತೋಟಗಾರಿಕಾ ಮೇಳ–2026ರ ಅಂಗವಾಗಿ ಪ್ರಗತಿಪರ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ.

ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಗತಿಪರ ರೈತರು ಹಾಗೂ ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಿದವರ ಪೈಕಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಹಾಗೂ ಒಬ್ಬ ರೈತ ಮಹಿಳೆಯನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಆಯ್ಕೆಯಾದವರಿಗೆ ಕೃಷಿ ಮತ್ತು ತೋಟಗಾರಿಕಾ ಮೇಳ–2026ರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಆಸಕ್ತ ಪ್ರಗತಿಪರ ರೈತರು ಹಾಗೂ ರೈತ ಮಹಿಳೆಯರು ತಮ್ಮ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ವಿಜ್ಞಾನ ಕೇಂದ್ರ ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಪಡೆಯಬಹುದು.

ಅಥವಾ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ, ಸೆಪ್ಟೆಂಬರ್ 10, 2026ರೊಳಗೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ತಲುಪುವಂತೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು:

  • ಶಿವಮೊಗ್ಗ: 94808 38976
  • ದಾವಣಗೆರೆ: 94808 38209
  • ಚಿಕ್ಕಮಗಳೂರು: 94808 38203
  • ಉಡುಪಿ: 94808 38202
  • ಚಿತ್ರದುರ್ಗ: 94808 38201
  • ದಕ್ಷಿಣ ಕನ್ನಡ: 87947 06468

ಹೆಚ್ಚಿನ ಮಾಹಿತಿಗಾಗಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವೆಬ್‌ಸೈಟ್ ವೀಕ್ಷಿಸಬಹುದು.

Related posts

ಭದ್ರಾ ಮುಂಗಾರು ನೀರು: ಸಿಎಂ ಜೊತೆ ಸಮಾಲೋಚಿಸಿ ಅಂತಿಮ ನಿರ್ಧಾರ

JanaNota Editor

ರಾಜ್ಯಾದ್ಯಂತ ಒಂದು ವರ್ಷ ಕೃತಕ ಪನ್ನೀರ್ ನಿಷೇಧ

JanaNota Editor

ಸಾಗರ : ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಸಾವು

JanaNota Editor