ಜನ ನೋಟ
ರಾಜ್ಯ

ಮಂಡ್ಯದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ವೃದ್ಧೆ ಸಾವು: ಮನೆಯಲ್ಲಿ ₹8 ಲಕ್ಷಕ್ಕೂ ಅಧಿಕ ಹಣ ಪತ್ತೆ

ಮಂಡ್ಯ: ಭಿಕ್ಷಾಟನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟ ಬಳಿಕ, ಅವರ ಮನೆಯಲ್ಲಿ ₹8 ಲಕ್ಷಕ್ಕೂ ಅಧಿಕ ನಗದು ಹಣ ಪತ್ತೆಯಾಗಿರುವ ಘಟನೆ ಮಂಡ್ಯ ನಗರದ ಗುತ್ತಲು ಬಡಾವಣೆಯಲ್ಲಿ ನಡೆದಿದೆ.

ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದೆ. ಕುಟುಂಬದ ಆಸರೆಯಿಲ್ಲದೆ ಹಲವು ವರ್ಷಗಳಿಂದ ನಗರದ ವಿವಿಧೆಡೆ ಭಿಕ್ಷಾಟನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ನೂರ್ ಅವರು ಶನಿವಾರ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ.

ಅವರ ನಿಧನದ ಬಳಿಕ ಸಂಬಂಧಿಕರು ಹಾಗೂ ಸ್ಥಳೀಯರು ಅಂತ್ಯಕ್ರಿಯೆ ನೆರವೇರಿಸಿದ್ದರು. ಅಂತ್ಯಸಂಸ್ಕಾರದ ನಂತರ ನೂರ್ ವಾಸವಿದ್ದ ಮನೆ ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುತ್ತಿಟ್ಟಿದ್ದ ನೋಟಿನ ಕಂತೆಗಳು ಹಾಗೂ ಚೀಲಗಳಲ್ಲಿ ತುಂಬಿದ್ದ ಅಪಾರ ಪ್ರಮಾಣದ ನಾಣ್ಯಗಳು ಪತ್ತೆಯಾಗಿವೆ.

ಸ್ಥಳೀಯರು ಮತ್ತು ಸಂಬಂಧಿಕರು ಬೆಳಗ್ಗೆಯಿಂದ ಸಂಜೆಯವರೆಗೆ ಹಣವನ್ನು ಎಣಿಕೆ ಮಾಡಿದ್ದು, ಒಟ್ಟು ಮೊತ್ತ ₹8 ಲಕ್ಷಕ್ಕೂ ಅಧಿಕ ಎಂದು ತಿಳಿದುಬಂದಿದೆ. ಭಿಕ್ಷಾಟನೆ ಮೂಲಕ ಜೀವನ ಸಾಗಿಸುತ್ತಿದ್ದ ವೃದ್ಧೆಯ ಬಳಿ ಇಷ್ಟೊಂದು ಹಣ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.

ಈ ಘಟನೆ ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳೀಯ ಮುಖಂಡರು ಮಾತುಕತೆ ನಡೆಸಿದ ಬಳಿಕ ಪತ್ತೆಯಾದ ಸಂಪೂರ್ಣ ಹಣವನ್ನು ಮೃತ ನೂರ್ ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಲಾಗಿದೆ.

Related posts

KPSC ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್ : ಅಭ್ಯರ್ಥಿಗಳ ಹೆಸರು, ಹಣದ ಲೆಕ್ಕ–ಬ್ಯಾಂಕ್ ಖಾತೆ ವಿವರ ಪತ್ತೆ

JanaNota Editor

ಬೈಂದೂರು ಕರಾವಳಿ ಅಭಿವೃದ್ಧಿಗೆ ‘ಸಾಗರಮಾಲಾ’ ಯೋಜನೆ: ಪರಿಹಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮನವಿ

JanaNota Editor

ಮಾಫಿ ಸಾಕ್ಷಿಗೆ ದಿನಾಂಕ ನಿಗದಿ, ಸೆ.28ಕ್ಕೆ ದರ್ಶನ್ ಭವಿಷ್ಯ ಭಾಗಷಃ ನಿರ್ಧಾರ

JanaNota Editor