ಶಿವಮೊಗ್ಗ, ಆ.25: ಶಿವಮೊಗ್ಗ ನಗರದ ಜೈಲ್ ರಸ್ತೆಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಫುಟ್‌ಪಾತ್‌ನಲ್ಲಿ ಅಳವಡಿಸಲಾಗಿದ್ದ ಬೋರ್ಡ್‌ಗಳನ್ನು ಇಂದು ತೆರವುಗೊಳಿಸಲಾಯಿತು.

ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಬೋರ್ಡ್‌ಗಳನ್ನು ಕತ್ತರಿಸಿ ತೆರವುಗೊಳಿಸುವ ಮೂಲಕ ಫುಟ್‌ಪಾತ್‌ನ್ನು ಸಾರ್ವಜನಿಕರ ಸುಗಮ ಓಡಾಟಕ್ಕೆ ಮುಕ್ತಗೊಳಿಸುವ ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ, ಸಿಂಗಾರ್ ಶೋರೂಮ್ ಎದುರು ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಮತ್ತೊಂದು ಬದಿಯಲ್ಲಿ ‘ನೋ ಪಾರ್ಕಿಂಗ್’ ನಿಯಮ ಜಾರಿಯಲ್ಲಿದ್ದು, ನಿಯಮ ಉಲ್ಲಂಘಿಸಿ ವಾಹನಗಳನ್ನು ನಿಲ್ಲಿಸುವುದನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.
ಸಾರ್ವಜನಿಕರು ತಮ್ಮ ವಾಹನಗಳನ್ನು ನಿಗದಿಪಡಿಸಿರುವ ಪಾರ್ಕಿಂಗ್ ಸ್ಥಳದಲ್ಲಿಯೇ ನಿಲ್ಲಿಸಿ, ನೋ ಪಾರ್ಕಿಂಗ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.

ನಿಯಮ ಪಾಲನೆಯ ಮೂಲಕ ನಗರದ ಸುಗಮ ಸಂಚಾರಕ್ಕೆ ಹಾಗೂ ಸಂಚಾರಿ ಪೊಲೀಸರ ಕರ್ತವ್ಯ ನಿರ್ವಹಣೆಗೆ ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
