ಜನ ನೋಟ
ಶಿವಮೊಗ್ಗ

ಈದ್ ಮಿಲಾದ್ ಆಚರಣೆ ವೇಳೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 26 ರಂದು ಜಿಲ್ಲಾದ್ಯಂತ ಈದ್ ಮಿಲಾದ್ ಹಬ್ಬ ನಡೆಯಲಿದ್ದು, ಮೆರವಣಿಗೆಯ ಸಮಯದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಸಿಡಿಮದ್ದುಗಳನ್ನು ಬಳಸುವುದರಿಂದ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಹಾಗೂ ಇತರ ಧರ್ಮೀಯರ ಭಾವನೆಗಳಿಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.
ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಆಗಸ್ಟ್ 25 ರಿಂದ ಆಗಸ್ಟ್ 28 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Related posts

ಶಿವಮೊಗ್ಗ: ಹಣ ಕಡಿತ, ದೂರು ನಿರ್ಲಕ್ಷ್ಯ: ಯೂನಿಯನ್ ಬ್ಯಾಂಕ್‌ಗೆ ಬಡ್ಡಿ ಸಮೇತ ಪಾವತಿ ಆದೇಶ

JanaNota Editor

ಕರಡಿ ದಾಳಿಗೆ ಗಾಯಗೊಂಡ ಅರಣ್ಯ ವಾಚರ್‌ ಯೋಗಕ್ಷೇಮ ವಿಚಾರಿಸಿದ ಅಧಿಕಾರಿಗಳು

JanaNota Editor

ಆ.25ರಂದು ಬೃಹತ್ ವಿಧಾನಸೌಧ ಚಲೋ: ರೈತ ಸಂಘ

JanaNota Editor