ಜನ ನೋಟ
Image default
ಶಿವಮೊಗ್ಗ

ಶಿವಮೊಗ್ಗ : ಸೆ. 4 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಸರ್ಕಾರದ ಅಧಿಸೂಚನೆಯನ್ವಯ 2025-26ನೇ ಸಾಲಿನಲ್ಲಿ ಸೆಪ್ಟೆಂಬರ್ 4ರಂದು ‘ಮಾಂಸರಹಿತ ದಿನ’ ಎಂದು ಘೋಷಿಸಲಾಗಿದೆ. ಹೀಗಾಗಿ ಅಂದು ನಗರ ವ್ಯಾಪ್ತಿಯಲ್ಲಿ ಪ್ರಾಣಿವಧೆ ನಡೆಸುವುದು ಹಾಗೂ ಮಾಂಸ ಮಾರಾಟ ಮಾಡುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಮಾಂಸ ಮಾರಾಟದ ಉದ್ದಿಮೆದಾರರು ಸೆಪ್ಟೆಂಬರ್ 4ರಂದು ತಮ್ಮ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಿ, ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು.

ನಿಷೇಧದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಹಾಗೂ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ) ತಿಳಿಸಿದ್ದಾರೆ.

Related posts

ಮಲೆನಾಡಿನಲ್ಲಿ ಬರದ ಛಾಯೆ : ರೈತರ ಕೃಷಿ ಸಾಲ ಮನ್ನಾಕ್ಕೆ ಒತ್ತಾಯ

JanaNota Editor

ಆಶ್ರಯ ಮನೆಗಳ ವಿತರಣೆ ವಿಳಂಬ : ಅ.27ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

JanaNota Editor

ದೇವಿಯ ಕೃಪೆಯಿಂದ ಚಿನ್ನ ಸಿಕ್ಕಿದೆ ಎಂದು ನಂಬಿಸಿ ₹1.3 ಕೋಟಿ ವಂಚನೆ

JanaNota Editor