ಜನ ನೋಟ
ರಾಜ್ಯ

4 ತಿಂಗಳ ಅವಳಿ ಕಂದಮ್ಮಗಳ ನೀರಲ್ಲಿ ಮುಳುಗಿಸಿ ಹತ್ಯೆ : ತಾಯಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ನಾಲ್ಕು ತಿಂಗಳ ಅವಳಿ ಹೆಣ್ಣು ಕಂದಮ್ಮಗಳನ್ನು ನೀರು ತುಂಬಿದ್ದ ಬಕೆಟ್‌ನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಬಳಿಕ ತಾಯಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ವಾಜರಹಳ್ಳಿಯ ಬಿಸಿಸಿಎಚ್‌ಎಸ್‌ ಲೇಔಟ್‌ನಲ್ಲಿ ಮಂಗಳವಾರ ನಡೆದಿದೆ.

ಉಮಾದೇವಿ (44) ಕೃತ್ಯ ಎಸಗಿದ ಮಹಿಳೆ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅವರ ಪತಿ ರಾಮಲಿಂಗಪ್ಪ ನೀಡಿದ ದೂರಿನ ಮೇರೆಗೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಲಿಂಗಪ್ಪ ಮತ್ತು ಉಮಾದೇವಿ 2002ರಲ್ಲಿ ವಿವಾಹವಾಗಿದ್ದು, ಹಲವು ವರ್ಷಗಳ ಬಳಿಕ ಮಕ್ಕಳಾಗದ ಹಿನ್ನೆಲೆಯಲ್ಲಿ ಐವಿಎಫ್‌ ಚಿಕಿತ್ಸೆ ಪಡೆದಿದ್ದರು. ಇದರ ಫಲವಾಗಿ ಕಳೆದ ಮೇ 5ರಂದು ಉಮಾದೇವಿಗೆ ಅವಳಿ ಹೆಣ್ಣು ಮಕ್ಕಳು ಜನಿಸಿದ್ದರು.

ಆದರೆ ಕಳೆದ ಕೆಲವು ದಿನಗಳಿಂದ ಉಮಾದೇವಿ ಮಕ್ಕಳ ಪಾಲನೆಯಲ್ಲಿ ಆಸಕ್ತಿ ತೋರದೆ, ಮಕ್ಕಳನ್ನು ಆಶ್ರಮಕ್ಕೆ ಸೇರಿಸುವಂತೆ ಹೇಳುತ್ತಿದ್ದರು ಎನ್ನಲಾಗಿದೆ. ಅವರ ವರ್ತನೆಯಲ್ಲಿ ಬದಲಾವಣೆ ಕಂಡುಬಂದ ಹಿನ್ನೆಲೆಯಲ್ಲಿ ಪತಿ ನಿಮ್ಹಾನ್ಸ್‌ನಲ್ಲಿ ಮನೋವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಕೊಡಿಸಿದ್ದರು. ಹೆರಿಗೆಯ ನಂತರದ ಹಾರ್ಮೋನ್‌ ಅಸಮತೋಲನದಿಂದ ಇಂತಹ ವರ್ತನೆ ಕಂಡುಬರುತ್ತಿದೆ ಎಂದು ವೈದ್ಯರು ತಿಳಿಸಿದ್ದರು ಎನ್ನಲಾಗಿದೆ.

ಮಂಗಳವಾರ ಮಧ್ಯಾಹ್ನ ಉಮಾದೇವಿ ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದರು. ಬಳಿಕ ಮನೆಯವರು ಬಾಗಿಲು ತೆರೆದು ನೋಡಿದಾಗ ನಾಲ್ಕು ತಿಂಗಳ ಅವಳಿ ಮಕ್ಕಳು ಮೃತಪಟ್ಟಿರುವುದು ಕಂಡುಬಂದಿದೆ. ಮತ್ತೊಂದೆಡೆ ಉಮಾದೇವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ತಲಘಟ್ಟಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related posts

ಸಿ.ಎಸ್. ಷಡಾಕ್ಷರಿ ಅವರಿಗೆ ಬಸವ ಪ್ರಶಸ್ತಿ ಗರಿ

JanaNota Editor

ಪಾರ್ಟಿಗೆ ಹೋದ ಜಿಮ್ ಟ್ರೈನರ್ ಶವವಾಗಿ ಮನೆಗೆ : ನಾಲ್ವರು ವಶಕ್ಕೆ

JanaNota Editor

ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ: ಮಧು ಬಂಗಾರಪ್ಪ

JanaNota Editor