ಜನ ನೋಟ
ಶಿವಮೊಗ್ಗ

ರಾಷ್ಟ್ರಭಕ್ತರ ಬಳಗದ ಚಟುವಟಿಕೆಗೆ ಶಾಸಕ ಚನ್ನಬಸಪ್ಪ ಅಸಮಾಧಾನ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದ ರಾಜಕೀಯ ಚಟುವಟಿಕೆಗಳ ಕುರಿತು ಶಾಸಕ ಚನ್ನಬಸಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಭಕ್ತರ ಬಳಗ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ ಉದ್ದೇಶವೇ ಬೇರೆ ಆಗಿತ್ತು. ಆದರೆ ಶಿವಮೊಗ್ಗದಲ್ಲಿ ಬಿಜೆಪಿಯನ್ನು ಸೋಲಿಸುವ ಪ್ರಯತ್ನ ನಡೆಯುತ್ತಿರುವುದು ಕಂಡುಬರುತ್ತಿದೆ. ಇದು ಕಾಂಗ್ರೆಸ್‌ನಿಂದ ಆಗುತ್ತಿಲ್ಲ ಎಂಬುದನ್ನು ಎಲ್ಲರೂ ಯೋಚಿಸಬೇಕು. ಇಂತಹ ಬೆಳವಣಿಗೆಯನ್ನು ಈಶ್ವರಪ್ಪ ಅವರಿಂದ ಬಿಜೆಪಿ ನಿರೀಕ್ಷಿಸಿರಲಿಲ್ಲ ಎಂದು ಹೇಳಿದರು.

ರಾಷ್ಟ್ರಭಕ್ತರ ಬಳಗದಲ್ಲಿ ಬಿಜೆಪಿ ಕಾರ್ಯಕರ್ತರೂ ಇದ್ದಾರೆ. ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಗೊಂದಲ ಸೃಷ್ಟಿಸುವ ಕೆಲಸ ಮಾಡಬಾರದು. ಇಂತಹ ಬೆಳವಣಿಗೆಯನ್ನು ನಿಮ್ಮಿಂದ ನಿರೀಕ್ಷಿಸಿರಲಿಲ್ಲ ಎಂದು ಈಶ್ವರಪ್ಪ ಅವರಿಗೆ ಪರೋಕ್ಷವಾಗಿ ಸಂದೇಶ ನೀಡಿದರು.

ಹಿಂದುತ್ವದ ರಕ್ಷಣೆಗಾಗಿ ಬಿಜೆಪಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಯಾರೇ ಬಂದರೂ ಪಕ್ಷದ ಕಾರ್ಯಕರ್ತರು ಸುಮ್ಮನಿರುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಶಿವಮೊಗ್ಗ ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಈರುಳ್ಳಿ ಬೆಲೆ ಗಗನಕ್ಕೆ: ಗೌರಿ-ಗಣೇಶ ಹಬ್ಬದ ವೇಳೆ ಕೆಜಿಗೆ 100 ರೂ.ಗೆ ಏರಿಕೆ ಸಾಧ್ಯತೆ

JanaNota Editor

ಸಿ.ಎಸ್. ಷಡಾಕ್ಷರಿ ಭಾಷಣಕ್ಕೆ ಮಂತ್ರಮುಗ್ಧರಾದ ಜನತೆ : ಸ್ವದೇಶಿ ಮಂತ್ರಕ್ಕೆ ಸಾಕ್ಷಿಯಾದ ಶಿವಮೊಗ್ಗ

JanaNota Editor

ಗ್ರಾಮೀಣ ಮಕ್ಕಳಿಗೆ ಅಕ್ಷರ ದೀವಿಗೆ : ರಾಷ್ಟ್ರಮಟ್ಟದಲ್ಲಿ ಮಿಂಚಿದ ಹೊಸನಗರದ ಶಿಕ್ಷಕಿ

JanaNota Editor