ಜನ ನೋಟ
ಶಿವಮೊಗ್ಗ

ಸಾಗರ : ಕಡಿಮೆ ಅಂಕಕ್ಕೆ ಕೋಪ : ಮೂವರು ಮಕ್ಕಳಿಗೆ ಮನಬಂದಂತೆ ಥಳಿತ

ಸಾಗರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆಂಬ ಕಾರಣಕ್ಕೆ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ಹಲ್ಲೆ ನಡೆಸಿರುವ ಆರೋಪ ಸಾಗರ ತಾಲೂಕಿನಲ್ಲಿ ಕೇಳಿಬಂದಿದೆ.

ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುವಾಸೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ರಕ್ಷಿತಾ ಎಂಬ ಅತಿಥಿ ಶಿಕ್ಷಕಿ ಮಕ್ಕಳಿಗೆ ಥಳಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

2, 3 ಮತ್ತು 4ನೇ ತರಗತಿಯ ಮೂವರು ವಿದ್ಯಾರ್ಥಿಗಳ ಬೆನ್ನಿನ ಮೇಲೆ ಕೋಲಿನಿಂದ ಹೊಡೆದ ಪರಿಣಾಮ ಗಾಯಗಳಾಗಿದ್ದು, ಕೆಲವೆಡೆ ರಕ್ತ ಬಂದಿರುವುದಾಗಿ ಪೋಷಕರು ತಿಳಿಸಿದ್ದಾರೆ. ಮಕ್ಕಳು ಮನೆಗೆ ಮರಳಿದ ಬಳಿಕ ಗಾಯಗಳನ್ನು ಕಂಡು ಪೋಷಕರು ಆತಂಕಗೊಂಡಿದ್ದಾರೆ.

ಘಟನೆಗೆ ಗ್ರಾಮಸ್ಥರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಕ್ಕಳ ಮೇಲೆ ಹಲ್ಲೆ ನಡೆಸಿರುವ ಆರೋಪದ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Related posts

ಹಾಸ್ಟೆಲ್ ಊಟದ ಹಾಲ್‌ನಲ್ಲಿ ಬೀದಿ ನಾಯಿ : ಪರಿಶೀಲನೆ ವೇಳೆ ಅಧಿಕಾರಿಗಳಿಗೆ ಕಂಡುಬಂದ ಅಚ್ಚರಿ ದೃಶ್ಯ

JanaNota Editor

ಕಸ್ತೂರಿರಂಗನ್ ವರದಿ ವಿರೋಧಿಸಿ ಸಾಗರದಲ್ಲಿ ಪಾದಯಾತ್ರೆ

JanaNota Editor

ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್.ಪಿ.

JanaNota Editor