ಜನ ನೋಟ
Headlines

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಮೃತಪಟ್ಟ ವಿದ್ಯಾರ್ಥಿಗಳು

ಕೇರಳ : ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಸುಮಾರು 11.40ರ ವೇಳೆಗೆ ಕೈಪಮಂಗಲಂನ ಪಣಂಬಿಕ್ಕುನ್ನು ಪ್ರದೇಶದ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಗುರುವಾಯೂರು ಕಡೆಯಿಂದ ಕೊಡುಂಗಲ್ಲೂರು ಕಡೆಗೆ ತೆರಳುತ್ತಿದ್ದ ಕಾರು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಎಂಟು ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಕಾರ್ಯಕರ್ತರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಕಾರಿನಿಂದ ಹೊರತೆಗೆದಿದ್ದಾರೆ.

ಮೃತದೇಹಗಳನ್ನು ತ್ರಿಶೂರ್ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಅಪಘಾತಕ್ಕೀಡಾದ ಕಾರು ತಮಿಳುನಾಡು ನೋಂದಣಿಯದ್ದಾಗಿದ್ದು, ಪೊಲೀಸರು ಘಟನೆಯ ಕುರಿತು ತನಿಖೆ ಮುಂದುವರಿಸಿದ್ದಾರೆ.

 

Related posts

ಬರ್ತ್‌ಡೇ ಕೇಕ್‌ನಲ್ಲಿ ಸತ್ತ ಹಲ್ಲಿ ಪತ್ತೆ, ಮಕ್ಕಳು ಸೇರಿ 11 ಮಂದಿ ಆಸ್ಪತ್ರೆಗೆ ದಾಖಲು

JanaNota Editor

ಹನೂರು ಶೂಟೌಟ್ ಗೆ ಹೊಸ ತಿರುವು: ಅರಣ್ಯಾಧಿಕಾರಿಗಳೇ ಮೊದಲು ಗುಂಡು ಹಾರಿಸಿದ್ದು : ಪರಾರಿಯಾಗಿದ್ದ ನಾಲ್ಕನೇ ವ್ಯಕ್ತಿ ಹೇಳಿಕೆ

JanaNota Editor

ರಾಮಮಂದಿರ ದೇಣಿಗೆ ಕಳ್ಳತನ ಆರೋಪ : ಚಂಪತ್ ರಾಯ್, ಅನಿಲ್‌ಗೆ SIT ಕ್ಲೀನ್ ಚಿಟ್

JanaNota Editor