ಜನ ನೋಟ
ಶಿವಮೊಗ್ಗ

ಅರಣ್ಯ ಸಂಚಾರಿದಳ ದಿಢೀರ್ ದಾಳಿ : 21 ಕೆ.ಜಿ ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ಹೊಸನಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಸಂಚಾರಿದಳದ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ದಾಳಿಯಲ್ಲಿ 21 ಕೆ.ಜಿ ಜಿಂಕೆ ಮಾಂಸ ಹಾಗೂ ಎರ್ಟಿಗಾ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಮಡಿಕೇರಿಯ ಅರಣ್ಯ ಸಂಚಾರಿದಳದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರ್ ಅವರ ಮಾರ್ಗದರ್ಶನದಲ್ಲಿ ಸಾಗರದ ಅರಣ್ಯ ಸಂಚಾರಿದಳದ ಪಿಎಸ್ಐ ಕೆ. ವಿನಾಯಕ ಹಾಗೂ ಸಿಬ್ಬಂದಿ ಶುಕ್ರವಾರ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಬರುವೆ ಮುಖ್ಯರಸ್ತೆಯಲ್ಲಿ ದಿಢೀರ್ ದಾಳಿ ನಡೆಸಿದರು.

ಈ ವೇಳೆ ಜಿಂಕೆ ಮಾಂಸವನ್ನು ಎರ್ಟಿಗಾ ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಆರೋಪಿಗಳಾದ ಬರುವೆ ಗ್ರಾಮದ ಗುರುರಾಜ್ ಬಿನ್ ನರಸಿಂಹ ನಾಯ್ಕ್ ಹಾಗೂ ಕರಡಿಗ ಗ್ರಾಮದ ಗಣೇಶ್ ಬಿನ್ ಗೋಪಾಲ್ ಪರಾರಿಯಾಗಿದ್ದು, ಅವರ ಪತ್ತೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿದಳದ ಸಿಬ್ಬಂದಿಗಳಾದ ಬಿ.ಸಿ. ಗಣೇಶ್, ಆಂಜನೇಯ ಪಾಟೀಲ್, ಚಂದ್ರಕಾಂತ್, ಸುರೇಶ್, ಪ್ರಮೋದಿನಿ ಹಾಗೂ ಹೆಚ್.ಬಿ. ದೊಡ್ಡಮನಿ ಭಾಗವಹಿಸಿದ್ದರು.

Related posts

ಸಾಗರ ಬಸ್ಸಿನಲ್ಲಿ ಗಾಢ ನಿದ್ರೆಗೆ ಜಾರಿದ ಮಹಿಳೆ: 17 ಲಕ್ಷ ರೂ. ಮೌಲ್ಯದ ಆಭರಣ ಕಳ್ಳತನ

JanaNota Editor

ಆ.16ರಂದು ವೀರಶೈವ ಲಿಂಗಾಯತ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

JanaNota Editor

ಆ. 13- ಸೆ.9: ಮನೆ-ಮನಗಳಲ್ಲಿ ಶ್ರಾವಣ ಚಿಂತನ

JanaNota Editor