ಜನ ನೋಟ
ಶಿವಮೊಗ್ಗ

ಸಕ್ರೆಬೈಲ್‌ನಲ್ಲಿ ಶಾಲಾ ಬಸ್ ಅಪಘಾತ : ಮರಕ್ಕೆ ಡಿಕ್ಕಿ, ಚಾಲಕ–ಮಕ್ಕಳಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಕೆಲವು ಮಕ್ಕಳು ಸಣ್ಣಪುಟ್ಟ ಗಾಯಗೊಂಡ ಘಟನೆ ಶಿವಮೊಗ್ಗ ಸಮೀಪದ ಸಕ್ರೆಬೈಲ್‌ನಲ್ಲಿ ನಡೆದಿದೆ.

ನಗರದ ನ್ಯೂ ಮಂಡಳಿ ಪ್ರದೇಶದಲ್ಲಿರುವ ಖಾಸಗಿ ಶಾಲೆಯೊಂದರ ಬಸ್ ಸಕ್ರೆಬೈಲ್ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಲಾರಿಯೊಂದು ಅಡ್ಡ ಬಂದಿದೆ ಎನ್ನಲಾಗಿದೆ. ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಬಸ್ಸನ್ನು ರಸ್ತೆ ಬದಿಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.

ಅಪಘಾತದ ಪರಿಣಾಮ ಬಸ್ಸಿನಲ್ಲಿದ್ದ ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಾಲಕರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಅಪಘಾತದ ನಿಖರ ಕಾರಣ ಹಾಗೂ ಗಾಯಗೊಂಡವರ ವಿವರಗಳ ಕುರಿತು ಮಾಹಿತಿ ನಿರೀಕ್ಷಿಸಲಾಗಿದೆ.

Related posts

ಬಿಜೆಪಿ ಸೇರ್ಪಡೆ ಸುದ್ದಿ ಸಂಪೂರ್ಣ ಸುಳ್ಳು: ಗೋಪಾಲಕೃಷ್ಣ ಬೇಳೂರು

JanaNota Editor

ಅಭಿವೃದ್ಧಿ ಕಾರ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಆರ್.ಕೆ. ಸಿದ್ದರಾಮಣ್ಣ

JanaNota Editor

ಶಾಲಾ ಸೌಲಭ್ಯಗಳಲ್ಲಿ ಕಳಪೆತನ ಸಹಿಸಲ್ಲ : ಮಧು ಬಂಗಾರಪ್ಪ

JanaNota Editor