ಜನ ನೋಟ
ಶಿವಮೊಗ್ಗ

ಸೆ. 13: ಪ್ರತಿಭಾವಂತ ಭೋವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಭೋವಿ (ವಡ್ಡರ) ವಿದ್ಯಾವರ್ಧಕ ಸಂಘದ ವತಿಯಿಂದ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಜಿಲ್ಲೆಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೆ. 13ರಂದು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಸ್. ರವಿಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 13ರ ಭಾನುವಾರ ಬೆಳಗ್ಗೆ 10.30ಕ್ಕೆ ನಗರದ ಬಾಲರಾಜ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಭೋವಿ ಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಸಮಾಜದ ಕುಲಗುರುಗಳು ಹಾಗೂ ಚಿತ್ರದುರ್ಗ–ಬಾಗಲಕೋಟೆ ಭೋವಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ಸಂಘದ ಅಧ್ಯಕ್ಷ ಎಸ್. ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಶಾಸಕರು ಹಾಗೂ ನಿಗಮ-ಮಂಡಳಿ ಅಧ್ಯಕ್ಷರಾದ ಬಿ.ಕೆ. ಸಂಗಮೇಶ್ವರ್ ಹಾಗೂ ಗೋಪಾಲಕೃಷ್ಣ ಬೇಳೂರು, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರ್ಯನಾಯ್ಕ, ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ ಹಾಗೂ ಬಲ್ಕಿಶ್ ಬಾನು ಭಾಗವಹಿಸಲಿದ್ದಾರೆ ಎಂದರು.

ಈ ಬಾರಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಲಾ ₹5 ಸಾವಿರ ನಗದು ಬಹುಮಾನದೊಂದಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು. ಇದರ ಜತೆಗೆ ಸಮಾಜದ ಸಂಘಟನೆಗೆ ಈ ಬಾರಿ ನೂತನವಾಗಿ ಸದಸ್ಯತ್ವ ಪಡೆದ ಸದಸ್ಯರಿಗೂ ಸಮಾರಂಭದಲ್ಲಿ ಗುರುತಿನ ಚೀಟಿ ವಿತರಿಸಲಾಗುವುದು ಎಂದು ರವಿಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಬಸವರಾಜಪ್ಪ ಹೆಚ್.ಹೆಚ್., ಕಾರ್ಯದರ್ಶಿ ವೀರೇಶಪ್ಪ ಕೆ.ಎನ್., ಖಜಾಂಚಿ ಪಿ. ಲೋಕೇಶ್, ನಿರ್ದೇಶಕರಾದ ಬಿ.ಟಿ. ನಾಗರಾಜ್, ವೀರಭದ್ರಪ್ಪ ಪೂಜಾರಿ, ಧೀರರಾಜ್ ಹೆಚ್. ಹೊನ್ನವಿಲೆ, ಡಿ. ಬಸವರಾಜ್, ಕೌಶಿಕ್ ಚಂದನ್ ಪಿ., ತಿಮ್ಮರಾಜು ವೈ., ಕೆ. ರಮೇಶ್ ನವುಲೆ ಹಾಗೂ ಎಂ. ಕೃಷ್ಣಮೂರ್ತಿ ಉಪಸ್ಥಿತರಿದ್ದರು.

Related posts

ರಜನಿಕಾಂತ್‌ ಮೇಲಿನ ಅಭಿಮಾನಕ್ಕೆ ಫಿದಾ! ‘ಜೈಲರ್ 2’ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಸಂಜು ಸ್ಯಾಮ್ಸನ್

JanaNota Editor

ಕರಡಿ ದಾಳಿಗೆ ಗಾಯಗೊಂಡ ಅರಣ್ಯ ವಾಚರ್‌ ಯೋಗಕ್ಷೇಮ ವಿಚಾರಿಸಿದ ಅಧಿಕಾರಿಗಳು

JanaNota Editor

ಶಿಕಾರಿಪುರದ ಹರಿಗೆ ಗ್ರಾಮದಲ್ಲಿ ಭೀಗರ ಊಟಕ್ಕೆ ನಿಷೇಧ; ನಿಯಮ ಮೀರಿದ್ರೆ 1 ಲಕ್ಷ ದಂಡ

JanaNota Editor