ಶಿವಮೊಗ್ಗ, ಸೆ.೧೭: ತಾಲೂಕಿನ ಹಾರನಹಳ್ಳಿ ರೈಲು ನಿಲ್ದಾಣದ ಪ್ಲಾಟ್‌ಫಾರಂ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಹಾರನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುಗಮ ಮತ್ತು ಸುರಕ್ಷಿತ ರೈಲು ಪ್ರಯಾಣದ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಶಿವಮೊಗ್ಗ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಬದ್ಧರಾಗಿರುವುದಾಗಿ ಸಂಸದರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ರೈಲ್ವೆ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
