ಶಿವಮೊಗ್ಗ: ಗಣೇಶ ವಿಸರ್ಜನೆಗೆ ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲೂಕಿನ ದೇವರಹಳ್ಳಿ ಕೆರೆಯ ಬಳಿ ನಡೆದಿದೆ.
ರಾಕೇಶ್ (20) ಕೆರೆಯಲ್ಲಿ ಮುಳುಗಿ ಮೃತಪಟ್ಟ ಯುವಕ. ಭದ್ರಾವತಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್ ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ಗಣೇಶ ವಿಸರ್ಜನಾ ಮೆರವಣಿಗೆ ರವಿವಾರ ಸಂಜೆ ಆರಂಭಗೊಂಡಿತ್ತು. ತಡರಾತ್ರಿ ಒಂದು ಗಂಟೆ ಸುಮಾರಿಗೆ ಗಣೇಶ ವಿಸರ್ಜನಾ ಮೆರವಣಿಗೆ ದೇವರಹಳ್ಳಿ ಕೆರೆಯ ಬಳಿ ತಲುಪಿತ್ತು.
ದೇವರಹಳ್ಳಿ ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ರಾಕೇಶ್ ನೀರಿನಲ್ಲಿ ಮುಳುಗಿದ್ದಾರೆ. ರಾತ್ರಿಯೇ ಅಗ್ನಿಶಾಮಕ ದಳ ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಸಿದ್ದಾರೆ.
ನಿರಂತರ ಶೋಧದ ಬಳಿಕ ಸೋಮವಾರ ಬೆಳಿಗ್ಗೆ ರಾಕೇಶ್ ಮೃತದೇಹ ಪತ್ತೆ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗೆ ತಾಲೂಕು ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.
ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
