ಜನ ನೋಟ
ಶಿವಮೊಗ್ಗ

ಶಿವಮೊಗ್ಗ : ಶಾಲಾ ಕಟ್ಟಡಕ್ಕೆ NOC ನೀಡಲು ಲಂಚ : ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಅಗ್ನಿಶಾಮಕ ದಳದ ನಿರಾಕ್ಷೇಪಣಾ ಪತ್ರ (NOC) ನೀಡಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಶಿಕಾರಿಪುರ ಟೌನ್‌ನಲ್ಲಿರುವ ಶಾಲೆಯೊಂದರ ನೂತನ ಕಟ್ಟಡಕ್ಕೆ ಅಗ್ನಿಶಾಮಕ ಇಲಾಖೆಯಿಂದ NOC ಪಡೆಯಬೇಕಾಗಿತ್ತು. ಈ NOC ನೀಡಲು ಅಧಿಕಾರಿ ಅಶೋಕ್ ಕುಮಾರ್ ಅವರು ದೂರುದಾರ ಅನೂಪ್ ಅವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಲಂಚ ನೀಡಲು ಇಚ್ಛಿಸದ ಅನೂಪ್ ಅವರು ಈ ಕುರಿತು ಶಿವಮೊಗ್ಗ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆಗೆ ಯೋಜನೆ ರೂಪಿಸಿದ್ದರು.

ಇಂದು ದೂರುದಾರರಿಂದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಶೋಕ್ ಕುಮಾರ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್‌ಪೆಕ್ಟರ್ ವೀರಬಸಪ್ಪ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related posts

ಗ್ರಾಮೀಣ ಮಕ್ಕಳಿಗೆ ಅಕ್ಷರ ದೀವಿಗೆ : ರಾಷ್ಟ್ರಮಟ್ಟದಲ್ಲಿ ಮಿಂಚಿದ ಹೊಸನಗರದ ಶಿಕ್ಷಕಿ

JanaNota Editor

ದಸರಾ ವೇದಿಕೆಗೆ ಶಾಸಕ ಎಸ್.ಎನ್. ಚನ್ನಬಸಪ್ಪರಿಂದ ಗುದ್ದಲಿ ಪೂಜೆ

JanaNota Editor

ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಅ.11ರಿಂದ 21ರವರೆಗೆ ನವರಾತ್ರಿ

JanaNota Editor