ಜನ ನೋಟ
ರಾಜ್ಯ

ಸಿ.ಎಸ್. ಷಡಾಕ್ಷರಿ ಅವರಿಗೆ ಬಸವ ಪ್ರಶಸ್ತಿ ಗರಿ

: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಗೆ ಒಲಿದ ಗೌರವ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ಬಸವ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರಗಳ ಗಣ್ಯರ ಸಾಲಿನಲ್ಲಿ ಷಡಾಕ್ಷರಿ ಅವರು ಪ್ರಶಸ್ತಿಗೆ ಆಯ್ಕೆಯಾಗಿರುವುದು ವಿಶೇಷ ಗಮನ ಸೆಳೆದಿದೆ.

ಸರ್ಕಾರಿ ನೌಕರರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಷಡಾಕ್ಷರಿ ಅವರಿಗೆ ಬಸವ ಪ್ರಶಸ್ತಿ ಸಂದಿರುವುದು ಅವರ ಅಭಿಮಾನಿಗಳು ಹಾಗೂ ನೌಕರರ ವಲಯದಲ್ಲಿ ಸಂತಸ ಮೂಡಿಸಿದೆ.

ಬಸವಣ್ಣನವರ ಕಾಯಕ, ದಾಸೋಹ ಮತ್ತು ಸಮಾನತೆಯ ಆದರ್ಶಗಳ ಹೆಸರಿನ ಪ್ರಶಸ್ತಿಗೆ ಭಾಜನರಾದ ಸಿ.ಎಸ್. ಷಡಾಕ್ಷರಿ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

Related posts

ಬೈಂದೂರು ಕರಾವಳಿ ಅಭಿವೃದ್ಧಿಗೆ ‘ಸಾಗರಮಾಲಾ’ ಯೋಜನೆ: ಪರಿಹಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮನವಿ

JanaNota Editor

ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

JanaNota Editor

ಮಂಡ್ಯದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ವೃದ್ಧೆ ಸಾವು: ಮನೆಯಲ್ಲಿ ₹8 ಲಕ್ಷಕ್ಕೂ ಅಧಿಕ ಹಣ ಪತ್ತೆ

JanaNota Editor