ಜನ ನೋಟ
ರಾಜ್ಯ

ಗ್ರಾಮ ಪಂಚಾಯಿತಿ, ತಾಪಂ, ಜಿಪಂ ಚುನಾವಣೆ ಶೀಘ್ರದಲ್ಲೇ? ಸಚಿವ ಸವದಿ ಮಹತ್ವದ ಹೇಳಿಕೆ

ಹಾಸನ : ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಆದಷ್ಟು ಬೇಗ ನಡೆಸಲು ಸರ್ಕಾರ ತೀರ್ಮಾನಿಸಿದೆ. ಕೆಲವೇ ದಿನಗಳಲ್ಲಿ ಚುನಾವಣಾ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಹಾಸನದಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ತಿಳಿಸಿದರು. ಸದ್ಯ ಮೀಸಲಾತಿ ಅಂತಿಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಸಂಬಂಧ ಅಗತ್ಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಬಳಿಕ ಮೀಸಲಾತಿ ಅಂತಿಮಗೊಂಡು ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದೆ ಎಂದರು.

ರಾಜ್ಯದಲ್ಲಿ ಈ ಬಾರಿ ಕಳೆದ 50 ವರ್ಷಗಳ ಅವಧಿಯಲ್ಲೇ ಅತ್ಯಂತ ಕಡಿಮೆ ಮಳೆಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಬರ ಘೋಷಣೆಯ ಪ್ರಕ್ರಿಯೆ ಆರಂಭವಾಗಿದ್ದು, ಬೆಳೆ ಹಾನಿ, ಜಾನುವಾರುಗಳ ರಕ್ಷಣೆ, ಕುಡಿಯುವ ನೀರು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಸಮೀಕ್ಷೆಯಿಂದ ಲಭ್ಯವಾಗುವ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಬರ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕಿದೆ. ರೈತರಿಗೆ ಉಂಟಾಗಿರುವ ನಷ್ಟವನ್ನು ಹಂತ ಹಂತವಾಗಿ ತುಂಬಿಸುವ ಜವಾಬ್ದಾರಿ ಎರಡೂ ಸರ್ಕಾರಗಳ ಮೇಲಿದೆ ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು.

Related posts

4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್ : ಫಲಾನುಭವಿಗಳಿಗೆ ಎಚ್ಚರಿಕೆ

JanaNota Editor

ರಾಜ್ಯದಲ್ಲಿ ಹಾಲು ಮತ್ತು ಬಸ್‌ ಟಿಕೆಟ್‌ ದರ ಏರಿಕೆ ಫಿಕ್ಸ್ : ದರ ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ

JanaNota Editor

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳದ ಗವಿಮಠ ಸ್ವಾಮೀಜಿಗೆ ಅಧಿಕೃತ ಆಹ್ವಾನ

JanaNota Editor