ಜನ ನೋಟ
ಶಿವಮೊಗ್ಗ

ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ವಿವಾಹಿತೆ ಆತ್ಮಹತ್ಯೆ : ಪತಿ, ಅತ್ತೆಗೆ 10 ವರ್ಷ ಜೈಲು

ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆರೋಪಿಗಳಾದ ಪತಿ ಮತ್ತು ಅತ್ತೆಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಜ್ಯೋತಿ (24) ಮೃತಪಟ್ಟ ಮಹಿಳೆ. ಪತಿ ದಯಾನಂದ್ (37) ಮತ್ತು ಅತ್ತೆ ಸುಮಿತ್ರಾ (65) ಅವರು ಹೆಚ್ಚುವರಿ ವರದಕ್ಷಿಣೆ ತರುವಂತೆ ಜ್ಯೋತಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿತ್ತು.

ಕಿರುಕುಳದಿಂದ ಮನನೊಂದ ಜ್ಯೋತಿ ಅವರು 2021ರಲ್ಲಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡಿದ್ದ ಅಂದಿನ ಡಿವೈಎಸ್ಪಿ ಶಾಂತವೀರ್ ಇ. ಅವರು ತನಿಖೆ ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯವು ಆರೋಪಿಗಳಾದ ಪತಿ ದಯಾನಂದ್ ಮತ್ತು ಅತ್ತೆ ಸುಮಿತ್ರಾ ಅವರಿಗೆ ತಲಾ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Related posts

ಶಿಕಾರಿಪುರದಲ್ಲಿ ಭಾರತ್ ಜೋಡೋ 2.0 ಪಾದಯಾತ್ರೆಗೆ ಬಿ.ಕೆ.ಹರಿಪ್ರಸಾದ್ ಚಾಲನೆ

JanaNota Editor

ಸಾಗರ ಬಸ್ಸಿನಲ್ಲಿ ಗಾಢ ನಿದ್ರೆಗೆ ಜಾರಿದ ಮಹಿಳೆ: 17 ಲಕ್ಷ ರೂ. ಮೌಲ್ಯದ ಆಭರಣ ಕಳ್ಳತನ

JanaNota Editor

ಎಸ್‌ಐಆರ್‌ ಪ್ರಕ್ರಿಯೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ: ಕೆ.ಎಸ್. ಈಶ್ವರಪ್ಪ

JanaNota Editor