ಜನ ನೋಟ
Headlines

ಬಿಜೆಪಿಯಲ್ಲೂ ಇದೆ ಸಿಡಿ ಫ್ಯಾಕ್ಟರಿ, ಸದ್ಯದಲ್ಲೇ ಹೊರ ಬರುತ್ತೆ: ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ

ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಸಿಡಿ ಮತ್ತು ಸ್ಟಿಂಗ್ ಆಪರೇಷನ್‌ ಸಂಬಂಧಿತ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ ಮತ್ತೊಂದು ಸ್ಫೋಟಕ ಆರೋಪ ಕೇಳಿಬಂದಿದೆ.

‘ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ. ಅಲ್ಲಿಯೂ ಕೆಲವು ಸ್ಟಿಂಗ್ ಆಪರೇಷನ್‌ಗಳು ನಡೆದಿವೆ. ಆ ಸಿಡಿಗಳು ಯಾವಾಗ ಹೊರಬರುತ್ತವೆ ಎಂಬುದನ್ನು ನೋಡಬೇಕು’ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಯತ್ನಾಳ್, ಕರ್ನಾಟಕದಲ್ಲಿ ಎರಡು ಸಿಡಿ ಫ್ಯಾಕ್ಟರಿಗಳಿವೆ ಎಂದು ತಾವು ಬಹಳ ಹಿಂದೆಯೇ ಹೇಳಿದ್ದಾಗಿ ತಿಳಿಸಿದರು. ಒಂದು ಸಿಡಿ ಫ್ಯಾಕ್ಟರಿ ಯಾವುದು ಎಂಬುದು ಎಲ್ಲರಿಗೂ ಗೊತ್ತಾಗಿದೆ ಎಂದ ಅವರು, ಮತ್ತೊಂದು ಫ್ಯಾಕ್ಟರಿ ಬಿಜೆಪಿಯಲ್ಲೂ ಇದೆ ಎಂದು ಆರೋಪಿಸಿದರು.

ರಾಜಕೀಯ ಎದುರಾಳಿಗಳು ಹಾಗೂ ಭವಿಷ್ಯದಲ್ಲಿ ತಮಗೆ ಅಡ್ಡಿಯಾಗಬಹುದು ಎಂದು ಭಾವಿಸುವವರನ್ನು ಬ್ಲ್ಯಾಕ್‌ಮೇಲ್ ಮಾಡಲು ಇಂತಹ ವಿಡಿಯೋಗಳನ್ನು ಬಳಸಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದರು.

ಕರ್ನಾಟಕದಲ್ಲಿ ಸಿಡಿ ಮತ್ತು ಸ್ಟಿಂಗ್ ಆಪರೇಷನ್‌ಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುವುದು ಒಂದು ವ್ಯವಹಾರವಾಗಿ ಬೆಳೆದಿದೆ. ರಾಜಕೀಯಕ್ಕೆ ಯಾವುದೋ ನೆಪದಲ್ಲಿ ಪ್ರವೇಶಿಸಿ, ವಿಡಿಯೋಗಳನ್ನು ಮಾಡಿಕೊಂಡು ಹಣಕ್ಕಾಗಿ ಶಾಸಕರನ್ನೇ ಬ್ಲ್ಯಾಕ್‌ಮೇಲ್ ಮಾಡುವ ತಂಡಗಳು ಬೆಂಗಳೂರಿನಲ್ಲಿ ಸಾಕಷ್ಟಿವೆ ಎಂದು ಯತ್ನಾಳ್ ಆರೋಪಿಸಿದರು.

Related posts

ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಕಾಮುಕ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

JanaNota Editor

ದೀಪಾವಳಿ ನಂತರ 2,000 ರೂ.ಗಿಂತ ಹೆಚ್ಚಿನ ಮೊತ್ತದ ಯುಪಿಐ ವಹಿವಾಟುಗಳಿಗೆ ಶುಲ್ಕಗಳು ಜಾರಿ

JanaNota Editor

₹100ರ ಗಡಿಗೆ ಸಿಎನ್‌ಜಿ : ವಾಹನ ಸವಾರರು ಕಂಗಾಲು

JanaNota Editor