ಜನ ನೋಟ
ಶಿವಮೊಗ್ಗ

ಶಿವಮೊಗ್ಗದಲ್ಲಿ ಅ. 29ರಂದು ಉದ್ಯೋಗ ಮೇಳ: ಪಿಯುಸಿ, ಐಟಿಐ, ಡಿಪ್ಲೊಮಾ, ಪದವೀಧರರಿಗೆ ಅವಕಾಶ

ಶಿವಮೊಗ್ಗ : ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 29ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಯೊಂದು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

ಅರ್ಹತೆಗಳೇನು?

ಪಿ.ಯು.ಸಿ., ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿದ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್‌ನ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ

ಉದ್ಯೋಗ ಮೇಳದ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗವನ್ನು ನೇರವಾಗಿ ಸಂಪರ್ಕಿಸಬಹುದು. ಅಥವಾ 9380663606 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Related posts

ಶಿವಮೊಗ್ಗದ ಹಿರಿಯ ಪತ್ರಕರ್ತ ಜೇಸುದಾಸ್​​ರವರಿಗೆ ದಕ್ಷಿಣ ಭಾರತದ ಅತಿದೊಡ್ಡ ಮಾಧ್ಯಮ ಪ್ರಶಸ್ತಿ ಪ್ರಧಾನ

JanaNota Editor

ಮೊದಲ ಬಾರಿ ಸಿಗ್ನಲ್ ಜಂಪ್ ಗೆ 3 ಸಾವಿರ, ಮರುಕಳಿಸಿದರೆ 5 ಸಾವಿರ ಫೈನ್: ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಲು ಸರ್ಕಾರ ಪ್ಲಾನ್

JanaNota Editor

ಆ. 12: ಡಿಎಸ್ಸೆಸ್ ಗುರುಮೂರ್ತಿ ಜನ್ಮದಿನಾಚರಣೆ

JanaNota Editor