ಜನ ನೋಟ
ಶಿವಮೊಗ್ಗ

ಶಿವಮೊಗ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವು : ಹೂವಿನ ವ್ಯಾಪಾರಿಗಳಿಗೆ ಟ್ರಾಫಿಕ್ ಪೊಲೀಸರ ಎಚ್ಚರಿಕೆ

ಶಿವಮೊಗ್ಗ: ನಗರದ ಬಿಹೆಚ್ ರಸ್ತೆಯ ಶಿವಪ್ಪನಾಯಕ ವೃತ್ತದಲ್ಲಿರುವ ಹೂವಿನ ಮಾರುಕಟ್ಟೆ ಮುಂಭಾಗದ ಫುಟ್‌ಪಾತ್‌ನಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದವರನ್ನು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿ ತೆರವುಗೊಳಿಸಿದ್ದಾರೆ.

ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಅವರ ನೇತೃತ್ವದಲ್ಲಿ ಇಂದು ಕಾರ್ಯಾಚರಣೆ ನಡೆಸಲಾಗಿದ್ದು, ಫುಟ್‌ಪಾತ್‌ನಲ್ಲಿದ್ದ ಹೂವಿನ ವ್ಯಾಪಾರಿಗಳನ್ನು ತೆರವುಗೊಳಿಸಿ ಪಾದಚಾರಿಗಳು ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.

ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ

ಈ ಹಿಂದೆ ಹಲವು ಬಾರಿ ಟ್ರಾಫಿಕ್ ಪೊಲೀಸರು ಸಾರ್ವಜನಿಕರ ಹಿತದೃಷ್ಟಿಯಿಂದ ಫುಟ್‌ಪಾತ್‌ನಲ್ಲಿ ವ್ಯಾಪಾರ ವಹಿವಾಟು ನಡೆಸದಂತೆ ಸೂಚನೆ ನೀಡಿದ್ದರು. ಆದರೂ ಸೂಚನೆಗಳನ್ನು ನಿರ್ಲಕ್ಷಿಸಿ ಮತ್ತೆ ಮತ್ತೆ ಫುಟ್‌ಪಾತ್‌ನಲ್ಲೇ ಹೂವಿನ ವ್ಯಾಪಾರ ಮುಂದುವರಿಸಲಾಗುತ್ತಿತ್ತು ಎನ್ನಲಾಗಿದೆ.

ಇತ್ತೀಚೆಗಷ್ಟೇ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಫುಟ್‌ಪಾತ್‌ನಲ್ಲಿರುವ ಮುಂಗಟ್ಟುಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದರು. ಆದರೂ ವ್ಯಾಪಾರ ಮುಂದುವರಿದ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಮೈಕ್ ಮೂಲಕ ಎಚ್ಚರಿಕೆ ನೀಡಿ ತೆರವು

ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಅವರು ಮೈಕ್ ಮೂಲಕ ಪ್ರಕಟಣೆ ನೀಡಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು. ಬಳಿಕ ಫುಟ್‌ಪಾತ್‌ನಲ್ಲಿದ್ದ ವ್ಯಾಪಾರವನ್ನು ತೆರವುಗೊಳಿಸಿ ಸಾರ್ವಜನಿಕರು ಸುಗಮವಾಗಿ ಸಂಚರಿಸಲು ಅನುವು ಮಾಡಿಕೊಡಲಾಯಿತು.

ನಗರದಲ್ಲಿ ಪಾದಚಾರಿಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಹಾಗೂ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಟ್ರಾಫಿಕ್ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

Related posts

ಶಿವಮೊಗ್ಗದ ಹಿರಿಯ ಪತ್ರಕರ್ತ ಜೇಸುದಾಸ್​​ರವರಿಗೆ ದಕ್ಷಿಣ ಭಾರತದ ಅತಿದೊಡ್ಡ ಮಾಧ್ಯಮ ಪ್ರಶಸ್ತಿ ಪ್ರಧಾನ

JanaNota Editor

ಅನ್ನದಾತರ ಸಂಭ್ರಮಕ್ಕೆ ಸಾಕ್ಷಿಯಾದ ರೈತ ದಸರಾ ಜಾಥಾ

JanaNota Editor

ವಾಸವಿ ವಿದ್ಯಾಸಂಸ್ಥೆ ರಾಷ್ಟ್ರಕ್ಕೆ ದೊಡ್ಡ ಶಕ್ತಿಯಾಗಿ ಬೆಳೆಯಲಿದೆ: ಕೆ.ಎಸ್.ಈಶ್ವರಪ್ಪ

JanaNota Editor