ಜನ ನೋಟ
ಶಿವಮೊಗ್ಗ

ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು – ಪ್ರಯಾಣಿಕರು ಪಾರು

ತೀರ್ಥಹಳ್ಳಿ: ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರೊಂದು ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕೆರೆಗೆ ಮುಳುಗಡೆಯಾದ ಘಟನೆ ಗುರುವಾರ ತೀರ್ಥಹಳ್ಳಿ ತಾಲೂಕಿನ ಬಾಳಗಾರು ಸಮೀಪ ಸಂಭವಿಸಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ಈಜಿಕೊಂಡು ದಡ ಸೇರುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಗ್ರಾಮೀಣ ಮಕ್ಕಳ ಅಪ್ರತಿಮ ಸಾಧನೆಗೆ ಜೆಎನ್‌ಎನ್‌ಸಿಇ ಸಾಕ್ಷಿ

JanaNota Editor

ಆ. ೮: ಶಾಸಕರ ಕಚೇರಿ ಎದುರು‌ ನಾಗರಿಕ ಹಿತರಕ್ಷಣಾ ವೇದಿಕೆ ಧರಣಿ

JanaNota Editor

ಎಸ್‌ಐಆರ್‌ ಪ್ರಕ್ರಿಯೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ: ಕೆ.ಎಸ್. ಈಶ್ವರಪ್ಪ

JanaNota Editor