ಜನ ನೋಟ
ಶಿವಮೊಗ್ಗ

ಎಸ್‌ಐಆರ್ ಪರಿಷ್ಕರಣೆಯಲ್ಲಿ 56,725 ಮತದಾರರ ಹೆಸರು ಕೈಬಿಡುವ ಆತಂಕ

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ 56,725 ಮತದಾರರ ಹೆಸರು ಕೈಬಿಡುವ ಸಾಧ್ಯತೆ ಇದೆ ಎಂದು ರಾಷ್ಟ್ರಭಕ್ತ ಬಳಗದ ಕೋಶಾಧ್ಯಕ್ಷ ಕೆ.ಈ. ಕಾಂತೇಶ್ ಆತಂಕ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಹಾಗೂ ವಿಳಾಸದಲ್ಲಿ ಲಭ್ಯವಿಲ್ಲದವರ ಹೆಸರುಗಳನ್ನು ಪರಿಶೀಲಿಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳು ಕೈಬೀಳದಂತೆ ಎಚ್ಚರಿಕೆ ವಹಿಸಬೇಕು ಎಂದರು.

ರಾಷ್ಟ್ರಭಕ್ತ ಬಳಗದ ಕಾರ್ಯಕರ್ತರು ವಿವಿಧ ಬೂತ್‌ಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲಿಸುತ್ತಿದ್ದಾರೆ. ಶುಭ ಮಂಗಳ ಸಮುದಾಯ ಭವನದಲ್ಲಿರುವ ಎಸ್‌ಐಆರ್ ಕಚೇರಿ ಆ. 17ರವರೆಗೆ ಕಾರ್ಯನಿರ್ವಹಿಸಲಿದ್ದು, ಮತದಾರರು ತಮ್ಮ ಹೆಸರು ಪರಿಶೀಲಿಸಿಕೊಳ್ಳಬಹುದು ಎಂದರು.

ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಜಿಲ್ಲಾಡಳಿತ ಮತ್ತಷ್ಟು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

Related posts

ಹೊಲದಲ್ಲಿ ಹೂತಿಟ್ಟ ₹5 ಲಕ್ಷ ಹಣಕ್ಕೆ ಏನಾಯ್ತು ಗೊತ್ತಾ? ಗೆದ್ದಲುಗಳು ಮಾಡಿದ್ದೇನು ನೋಡಿ

JanaNota Editor

ಶೋಷಿತರ ಬದುಕಿಗೆ ಬೆಳಕಾದ ಡಿ. ದೇವರಾಜ ಅರಸು

JanaNota Editor

ಕಳಂಕಿತರಿಗೆ ಮತ್ತೆ ಮಂತ್ರಿಗಿರಿ: ಶಾಸಕ ಚನ್ನಬಸಪ್ಪ ಆಕ್ರೋಶ

JanaNota Editor