ಜನ ನೋಟ
ಶಿವಮೊಗ್ಗ

ಆ.16ರಂದು ವೀರಶೈವ ಲಿಂಗಾಯತ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

‘ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯ’ ಎಂದು ಮರುನಾಮಕರಣ

ಶಿವಮೊಗ್ಗ, : ನಗರದ ಡಿವಿಜನ್ ವೀರಶೈವ ಲಿಂಗಾಯತ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಆ.16ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಎನ್‌ಡಿವಿ ಹಾಸ್ಟೆಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಆಯನೂರು ಮಂಜುನಾಥ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ₹5 ಕೋಟಿ ಅನುದಾನ ನೀಡಿದ್ದರು. ಸಮಾಜದ ಸುಮಾರು 75 ದಾನಿಗಳಿಂದ ₹5 ಕೋಟಿ ದೇಣಿಗೆ ಸಂಗ್ರಹಿಸಿ ಒಟ್ಟು ₹10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ವಿದ್ಯಾರ್ಥಿನಿಲಯ ನಿರ್ಮಿಸಲಾಗಿದೆ ಎಂದರು.

ಹಳೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದರಿಂದ ನೂತನ ಕಟ್ಟಡ ನಿರ್ಮಿಸಲಾಗಿದೆ. ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮರುಘರಾಜೇಂದ್ರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.

ಅವರ ಸಮಾಜಸೇವೆ ಹಾಗೂ ಕೊಡುಗೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ವಿದ್ಯಾರ್ಥಿನಿಲಯಕ್ಕೆ ‘ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯ’ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.

ಆ.14ರಂದು ಬೆಳಿಗ್ಗೆ 6 ಗಂಟೆಗೆ ಗಂಗೆ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೂರು ಅಂತಸ್ತಿನ ನೂತನ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ 34 ಕೊಠಡಿಗಳಿದ್ದು, ಒಟ್ಟು 204 ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು ಅವಕಾಶವಿದೆ.

ಸುದ್ದಿಗೋಷ್ಠಿಯಲ್ಲಿ ಓಂಕಾರಮೂರ್ತಿ, ಪಿ. ರುದ್ರೇಶ್, ಎಸ್.ಎಸ್. ಜ್ಯೋತಿಪ್ರಕಾಶ್, ಹಾಲಪ್ಪ, ಡಿ.ಎಸ್. ಚಂದ್ರಶೇಖರ್, ಬಾಳೆಕಾಯಿ ಮೋಹನ್, ವಿರೂಪಾಕ್ಷಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಸಾಗರ : ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಸಾವು

JanaNota Editor

ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

JanaNota Editor

ಭದ್ರಾವತಿ ಸಮೀಪ ಅಡಿಕೆ ತೋಟಕ್ಕೆ ನುಗಿದ್ದ ಬಸ್ : ಓರ್ವ ಸಾವು

JanaNota Editor