ಜನ ನೋಟ
ಶಿವಮೊಗ್ಗ

ಕರಡಿ ದಾಳಿಗೆ ಗಾಯಗೊಂಡ ಅರಣ್ಯ ವಾಚರ್‌ ಯೋಗಕ್ಷೇಮ ವಿಚಾರಿಸಿದ ಅಧಿಕಾರಿಗಳು

ಶಿಕಾರಿಪುರ : ಅರಣ್ಯ ಇಲಾಖೆಯಲ್ಲಿ ಪ್ಲಾಂಟೇಶನ್ ವಾಚರ್ ಆಗಿ ಸೇವೆ ಸಲ್ಲಿಸುತ್ತಿರುವ ಶಿಡಿಗಿನಾಳು ಗ್ರಾಮದ ಕೆ.ಎನ್. ರಾಮು ಅವರು ಕರಡಿ ದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಾಮು ಅವರ ಮೇಲೆ ಕರಡಿ ಆಕಸ್ಮಿಕವಾಗಿ ದಾಳಿ ನಡೆಸಿದೆ. ವಿಷಯ ತಿಳಿದ ಕೂಡಲೇ ಸಾಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಫಯಾಜುದ್ದೀನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ನಾಯ್ಕ್ ವಿ.ಎಸ್. ಹಾಗೂ ವಲಯ ಅರಣ್ಯಾಧಿಕಾರಿ ಪರಶುರಾಮ ಎಲ್. ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು. ಅಧಿಕಾರಿಗಳು ರಾಮು ಅವರಿಗೆ ಧೈರ್ಯ ತುಂಬಿದರು.

ಬಳಿಕ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ ಅಧಿಕಾರಿಗಳು, ಗಾಯಾಳುವಿಗೆ ಅಗತ್ಯವಿರುವ ಸೂಕ್ತ ಹಾಗೂ ಅತ್ಯುತ್ತಮ ಚಿಕಿತ್ಸೆಯನ್ನು ಒದಗಿಸುವಂತೆ ಮನವಿ ಮಾಡಿದರು. ಅಲ್ಲದೆ, ಸಿಬ್ಬಂದಿಯ ಸಂಕಷ್ಟಕ್ಕೆ ಸ್ಪಂದಿಸಿ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದರು.

ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ ತಕ್ಷಣದ ಸ್ಪಂದನೆ ಹಾಗೂ ನೆರವಿಗೆ ರಾಮು ಅವರ ಕುಟುಂಬಸ್ಥರು ಮತ್ತು ಅರಣ್ಯ ಸಿಬ್ಬಂದಿ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಎಸ್‌ಐಆರ್‌ ಪ್ರಕ್ರಿಯೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ: ಕೆ.ಎಸ್. ಈಶ್ವರಪ್ಪ

JanaNota Editor

ಬೀರುವಿನ ಲಾಕರ್‌ನಲ್ಲಿದ್ದ ₹4.64 ಲಕ್ಷದ ಚಿನ್ನಾಭರಣ ನಾಪತ್ತೆ : ಸಂಬಂಧಿಕನ ಮೇಲೆಯೇ ಅನುಮಾನ!

JanaNota Editor

ಜವಳಿ ವರ್ತಕರ ಕ್ರೀಡಾಕೂಟ : ವರ್ತಕರ ಸಹಕಾರಕ್ಕೆ ಇನ್ಸ್‌ಪೆಕ್ಟರ್ ದೇವರಾಜ್ ಮೆಚ್ಚುಗೆ

JanaNota Editor