ಜನ ನೋಟ
ರಾಜ್ಯ

ಕಸ ಗುಡಿಸಲು ಫಾರ್ಚುನರ್‌ ಕಾರಿನಲ್ಲಿ ಬರುವ ಪೌರ ಕಾರ್ಮಿಕ

ಬಂಟ್ವಾಳ:  ಸೇಸಪ್ಪಣ್ಣ ಎಂಬ ಪೌರ ಕಾರ್ಮಿಕ ಪ್ರತಿನಿತ್ಯ ಕೆಲಸದ ಸ್ಥಳಕ್ಕೆ ತಮ್ಮದೇ ಫಾರ್ಚೂನರ್‌ ಕಾರನ್ನು ಸ್ವತಃ ಚಾಲನೆ ಮಾಡಿಕೊಂಡು ಬರುತ್ತಾರೆ. ಒಂದು ಜಾಗದಲ್ಲಿ ಅದನ್ನು ನಿಲ್ಲಿಸಿ ಬೆಳಗ್ಗೆ 5ಕ್ಕೇ ಪೊರಕೆ ಹಿಡಿದು ತಮ್ಮ ಕೆಲಸ ಆರಂಭಿಸುತ್ತಾರೆ.

50 ರೂ. ದಿನಗೂಲಿಯಿಂದ ಆರಂಭವಾದ ಅವರ ಬದುಕು ಈಗ ಐಷರಾಮಿ ಕಾರಿನಲ್ಲಿ ಓಡಾಡುವ ಹಂತಕ್ಕೆ ಬಂದಿದೆ. ಸ್ವಂತ ಮನೆಯನ್ನೂ ಹೊಂದಿದ್ದಾರೆ.

1996ರಲ್ಲಿ ಕೇವಲ 50 ರೂ. ದಿನಗೂಲಿಗೆ ಪೌರಕಾರ್ಮಿಕರಾಗಿ ಕೆಲಸ ಆರಂಭಿಸಿದ ಸೇಸಪ್ಪಣ್ಣ, ದಿನ ಕಳೆದಂತೆ ಕಾಯಂ ನೌಕರರಾದರು. 3ನೇ ತರಗತಿಯ ವಿದ್ಯಾಭ್ಯಾಸ ಹೊಂದಿದ್ದರೂ, ಬದುಕಿನ ಪಾಠಗಳನ್ನು ಅವರು ಅನುಭವದಿಂದ ಕಲಿತರು. ಜೀವನದ ಒಂದು ಹಂತದಲ್ಲಿ ವೈಯಕ್ತಿಕ ಮತ್ತು ಕೌಟುಂಬಿಕ ಕಾರಣಗಳಿಂದ ಕುಡಿತದ ಚಟಕ್ಕೆ ಒಳಗಾಗಿದ್ದರು. ಆದರೆ ಅದನ್ನು ತಮ್ಮ ಬದುಕಿನ ಅಂತಿಮ ಅಧ್ಯಾಯವಾಗಲು ಅವರು ಬಿಡಲಿಲ್ಲ.

2005ರ ಬಳಿಕ ಬದುಕನ್ನು ಬದಲಿಸಿಕೊಳ್ಳುವ ದೃಢ ನಿರ್ಧಾರ ಕೈಗೊಂಡರು. ಆಗ ಎಸ್‌ಐ ಆಗಿದ್ದ ಬೆಳ್ಳಿಯಪ್ಪ ಅವರ ಮಾತು ಅವರಿಗೆ ಪ್ರೇರಣೆಯಾಯಿತು. ಕುಡಿತವನ್ನು ಸಂಪೂರ್ಣವಾಗಿ ತ್ಯಜಿಸಿ, ದುಡಿಮೆಯ ದಾರಿಯಲ್ಲಿ ಹೊಸ ಬದುಕು ಆರಂಭಿಸಿದರು.

ಅಲ್ಲಿಂದ ಸೇಸಪ್ಪಣ್ಣ ಜೀವನದ ದಿಕ್ಕೇ ಬದಲಾಯಿತು. ದುಡಿಮೆ ಜತೆಗೆ ಕಾರು ಖರೀದಿಸುವ ಕ್ರೇಜ್ ಶುರುವಾಯಿತು. ಒಂದೊಂದು ಕಾರಿನಿಂದ ಬಡ್ತಿ ಪಡೆದು ಈಗ ಫಾರ್ಚೂನರ್‌ ಮಟ್ಟಕ್ಕೆ ಬೆಳೆದಿದ್ದಾರೆ.

ಸೇಸಪ್ಪಣ್ಣ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುವ ಜತೆಗೆ ಅಗತ್ಯವಿದ್ದಾಗ ತ್ಯಾಜ್ಯ ವಿಲೇವಾರಿ ವಾಹನದ ಚಾಲಕರ ಜವಾಬ್ದಾರಿಯನ್ನೂ ನಿರ್ವಹಿಸಿದ್ದಾರೆ. ಮಧ್ಯಾಹ್ನದ ಬಳಿಕ ಹೈನುಗಾರಿಕೆ ಹಾಗೂ ಕೂಲಿ ಕೆಲಸಕ್ಕೂ ತೆರಳುತ್ತಾರೆ.

Related posts

ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ: ಇಬ್ಬರು ಮಕ್ಕಳ ಸಹಿತ ದಂಪತಿ ನಾಪತ್ತೆ

JanaNota Editor

ಕರ್ನಾಟಕ ಬಂದ್‌ಗೆ ಸಿಗದ ಪೂರ್ಣ ಬೆಂಬಲ: ಕೆಎಸ್‌ಆರ್‌ಟಿಸಿ, ಮೆಟ್ರೋ, ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಣೆ

JanaNota Editor

ಬಿಜೆಪಿ–ಜೆಡಿಎಸ್ ಸಮನ್ವಯ ಸಭೆಯಲ್ಲಿ ಗಲಾಟೆ : ಕೈಕೈ ಮಿಲಾಯಿಸಿಕೊಂಡ ಕಾರ್ಯಕರ್ತರು

JanaNota Editor