ಜನ ನೋಟ
ರಾಜ್ಯ

ನಾಳೆಯಿಂದ ರಾಜ್ಯಾದ್ಯಂತ ‘108’ ಆಂಬ್ಯುಲೆನ್ಸ್ ಸೇವೆ ಬಂದ್: ಸಿಬ್ಬಂದಿಯಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ!

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ‘108’ ಆರೋಗ್ಯ ಕವಚ ಆಂಬ್ಯುಲೆನ್ಸ್ ಸಿಬ್ಬಂದಿ, ನಾಳೆ (ಸೆ.22) ರಾತ್ರಿ 8 ಗಂಟೆಯ ನಂತರ ರಾಜ್ಯಾದ್ಯಂತ 108 ಆಂಬ್ಯುಲೆನ್ಸ್ ಸೇವೆ ಸ್ಥಗಿತಗೊಳಿಸಿ, ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.

ಸಿಬ್ಬಂದಿಯ ಪ್ರಮುಖ ಬೇಡಿಕೆಗಳೇನು?

ವೇತನ ಹೆಚ್ಚಳ: ಒಪ್ಪಂದದ ಪ್ರಕಾರ ಪ್ರತಿ ವರ್ಷ ನೌಕರರ ವೇತನವನ್ನು ಪರಿಷ್ಕರಿಸಬೇಕು.

ಏಕರೂಪ ವೇತನ ವ್ಯವಸ್ಥೆ: ವಲಯವಾರು ವಿಂಗಡಣೆಯನ್ನು ರದ್ದುಗೊಳಿಸಿ, ಜ್ಯೇಷ್ಠತೆ (Seniority) ಆಧಾರದ ಮೇಲೆ ಎಲ್ಲರಿಗೂ ಸಮಾನ ವೇತನ ನೀಡಬೇಕು.

ಸಮಯಕ್ಕೆ ಸರಿಯಾಗಿ ಪಾವತಿ: ಕಾರ್ಮಿಕ ಇಲಾಖೆಯ ನಿಯಮಾವಳಿಯಂತೆ ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನ ಸಿಗಬೇಕು.

ಮೂಲಸೌಕರ್ಯ: 3 ಶಿಫ್ಟ್‌ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು. ಇದರೊಂದಿಗೆ ಎಲ್ಲಾ ಕಾರ್ಯಸ್ಥಳಗಳಲ್ಲಿ ವಿಶ್ರಾಂತಿ ಕೊಠಡಿ, ಶೌಚಾಲಯ ಹಾಗೂ ಆಂಬುಲೆನ್ಸ್ ಸ್ವಚ್ಛಗೊಳಿಸಲು ನೀರಿನ ವ್ಯವಸ್ಥೆ ಮಾಡಿಕೊಡಬೇಕು.

ಪರಿಹಾರ ಧನ: ಕರ್ತವ್ಯದ ಅವಧಿಯಲ್ಲಿ ಅಪಘಾತಕ್ಕೀಡಾಗಿ ಮೃತಪಡುವ ಸಿಬ್ಬಂದಿ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಧನ ನೀಡಬೇಕು.

ರಾಜ್ಯಾದ್ಯಂತ ನೌಕರರು ಸಾಮೂಹಿಕವಾಗಿ ಸೇವೆ ಬಂದ್ ಮಾಡಿ ರಾಜೀನಾಮೆ ನೀಡಲು ಮುಂದಾಗಿರುವುದರಿಂದ ನಾಳೆಯಿಂದ ತುರ್ತು ವೈದ್ಯಕೀಯ ಸೇವೆ ಹಾಗೂ ಆಂಬ್ಯುಲೆನ್ಸ್ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.

Related posts

ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ

JanaNota Editor

ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯದ ಬಗ್ಗೆ ಅಜ್ಜಯ್ಯ ಮಹತ್ವದ ಭವಿಷ್ಯವಾಣಿ

JanaNota Editor

ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಹೆಚ್ಚಳ

JanaNota Editor