ಜನ ನೋಟ
Headlines

ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ದಾಳಿ, ಪೊಲೀಸ್ ಚೆಕ್‌ಪೋಸ್ಟ್ ಧ್ವಂಸ : 11 ಸಾವು

ಡೇರಾ ಇಸ್ಮಾಯಿಲ್: ಪಾಕಿಸ್ತಾನದ ವಾಯುವ್ಯ ಭಾಗದಲ್ಲಿರುವ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಆತ್ಮಾಹುತಿ ಬಾಂಬ್​ ಸ್ಪೋಟ ಸಂಭವಿಸಿದ ಹಿನ್ನಲೆ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ವರದಿಯಾಗಿದೆ.

ಪೊಲೀಸ್ ತಪಾಸಣಾ ಕೇಂದ್ರವೊಂದನ್ನು ಗುರಿಯಾಗಿಸಿ ಉಗ್ರರು ಈ ಕೃತ್ಯವನ್ನು ಎಸಗಿದ್ದಾರೆಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ವಾಹನ ಡಿಕ್ಕಿ ಹೊಡೆಸಿ ಸ್ಫೋಟ!

ವರದಿಯ ಪ್ರಕಾರ, ಡೇರಾ ಇಸ್ಮಾಯಿಲ್ ಖಾನ್ ನಗರದ ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ಆತ್ಮಹತ್ಯಾ ಬಾಂಬರ್ ಸ್ಫೋಟಕಗಳನ್ನು ತುಂಬಿದ ವಾಹನವನ್ನು ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆಸಿದ್ದಾನೆ. ಸ್ಫೋಟದ ತೀವ್ರತೆಗೆ ತಪಾಸಣಾ ಕೇಂದ್ರ ಸಂಪೂರ್ಣ ಧ್ವಂಸವಾಗಿದೆ ಎನ್ನಲಾಗುತ್ತಿದೆ.

ಮೃತಪಟ್ಟವರು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರು ಭದ್ರತಾ ಸಿಬ್ಬಂದಿ ಹಾಗೂ ಸಾರ್ವಜನಿಕರಾಗಿದ್ದಾರೆಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಸಫ್ದರ್ ಬಲೋಚ್ ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಘಟನೆಯ ಬೆನ್ನಲ್ಲೇ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Related posts

ಹೊರ್ಮುಜ್ ಜಲಸಂಧಿಯಲ್ಲಿ ಯುಎಇಗೆ ಸೇರಿದ ಹಡಗಿನ ಮೇಲೆ ಇರಾನ್ ದಾಳಿ

JanaNota Editor

ಕೇಂದ್ರದ ವಿರುದ್ಧ ಸಮರ ಸಾರಿದ ಸಿಎಂ ವಿಜಯ್

JanaNota Editor

ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಯ ಭೀಕರ ಹತ್ಯೆ : ಫ್ರಿಡ್ಜ್‌ನಲ್ಲಿ ಪತ್ತೆಯಾಯ್ತು ತಲೆ

JanaNota Editor