ಜನ ನೋಟ
ಶಿವಮೊಗ್ಗ

ಜನರ ಮತವನ್ನೇ ಕಳ್ಳತನ ಮಾಡಲು ಬಿಜೆಪಿ ಮುಂದಾಗಿದೆ : ಮಂಜುನಾಥ್ ಭಂಡಾರಿ

ಶಿವಮೊಗ್ಗ : ಇದುವರೆಗೆ ರಾಜಕೀಯ ಲಾಭಕ್ಕಾಗಿ ಅನ್ಯಪಕ್ಷಗಳ ಶಾಸಕರು ಹಾಗೂ ಸಚಿವರನ್ನು ಸೆಳೆಯುತ್ತಿದ್ದ ಬಿಜೆಪಿ, ಇದೀಗ ಜನರ ಮತವನ್ನೇ ಕಳ್ಳತನ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆರೋಪಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶೇಷ ಮತ ಪರಿಷ್ಕರಣೆ (SIR) ಹೆಸರಿನಲ್ಲಿ ಕಾಂಗ್ರೆಸ್‌ಗೆ ಮತ ಹಾಕುವ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಮತಗಳನ್ನು ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಾಮಾನ್ಯ ಪ್ರಕ್ರಿಯೆಯಾಗಿದ್ದರೂ, ಅದನ್ನು ದುರುಪಯೋಗಪಡಿಸಿಕೊಂಡು ಮತಗಳನ್ನು ಕಳ್ಳತನ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಪಶ್ಚಿಮ ಬಂಗಾಳ ಮತ್ತು ಹರಿಯಾಣ ಚುನಾವಣೆಗಳಲ್ಲಿ ನಡೆದಿರುವ ಬೆಳವಣಿಗೆಗಳಿಂದ ಈ ವಿಚಾರ ಮತ್ತಷ್ಟು ಬೆಳಕಿಗೆ ಬಂದಿದೆ ಎಂದರು.

ಎಸ್‌ಐಆರ್ ನೆಪದಲ್ಲಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಬಿಜೆಪಿ ತಮಗೆ ಬೇಕಾದವರನ್ನು ಮತಪಟ್ಟಿಗೆ ಸೇರಿಸುವುದು ಹಾಗೂ ಬೇಡದವರ ಮತಗಳನ್ನು ತೆಗೆದುಹಾಕುವ ಕೆಲಸ ಮಾಡುತ್ತಿದೆ ಎಂದು ಭಂಡಾರಿ ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧವೂ ಆರೋಪಗಳನ್ನು ಮಾಡಿದ ಭಂಡಾರಿ, ಅವರು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೂರಿದರು. ಈ ವಿಚಾರವಾಗಿ ದೇಶಾದ್ಯಂತ ಕಾಂಗ್ರೆಸ್ ಹೋರಾಟ ರೂಪಿಸಲಿದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ.ಯೋಗೇಶ್, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ರಾಜ್ಯ ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ.ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎನ್. ರಮೇಶ್ ಹಾಗೂ ಪಿ.ಒ. ಶಿವಕುಮಾರ್ ಕಾಂಗ್ರೆಸ್ ಮುಖಂಡ ಎಸ್.ಪಿ. ದಿನೇಶ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related posts

ಈದ್ ಮಿಲಾದ್ ಆಚರಣೆ ವೇಳೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

JanaNota Editor

ಧರಣಿ ನಿಲ್ಲಿಸಲು ಮನವಿ: ಮನವೊಲಿಕೆ ವಿಫಲ

JanaNota Editor

ಅ.8, 9ರಂದು ನೀನಾಸಂ ನಾಟಕೋತ್ಸವ

JanaNota Editor