ಜನ ನೋಟ
ಶಿವಮೊಗ್ಗ

ಭದ್ರಾವತಿ : ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್‌ ಬೈಕ್ ಗೆ ಗುದ್ದಿದ ಕಾರು : ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ಭದ್ರಾವತಿ: ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್‌ಗಳ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಹೋಂ ಗಾರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭದ್ರಾವತಿಯ ಉಂಬ್ಳೆಬೈಲು ರಸ್ತೆಯ ಮೂಲೆಕಟ್ಟೆ ಬಳಿ ಕಳೆದ ರಾತ್ರಿ ನಡೆದಿದೆ.

ಮೃತರನ್ನು ಸಂಗಯ್ಯ (37) ಎಂದು ಗುರುತಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಹೋಂ ಗಾರ್ಡ್‌ ಮುರಳಿ (32) ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಗಯ್ಯ ಮತ್ತು ಮುರಳಿ ಅವರು ಕರ್ತವ್ಯದ ನಿಮಿತ್ತ ಬೈಕ್‌ನಲ್ಲಿ ಬೊಮ್ಮನಕಟ್ಟೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಅನ್ನು ಸ್ವಲ್ಪ ದೂರ ಎಳೆದೊಯ್ದ ಕಾರು, ಬಳಿಕ ವಿದ್ಯುತ್‌ ಕಂಬಕ್ಕೆ ಅಪ್ಪಳಿಸಿದೆ.

ಅಪಘಾತದ ತೀವ್ರತೆಗೆ ವಿದ್ಯುತ್‌ ಕಂಬ ತುಂಡಾಗಿ ಬಿದ್ದಿದ್ದು, ಕಾರಿನ ಮುಂಭಾಗ ಹಾಗೂ ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿವೆ. ಘಟನೆಯಲ್ಲಿ ಸಂಗಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related posts

ಸೆ.25ರಂದು ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ

JanaNota Editor

ಮಂಡಿನೋವು ತಪಾಸಣಾ ಶಿಬಿರ ಸೆ.15ರಿಂದ 19ರವರೆಗೆ ವಿಸ್ತರಣೆ

JanaNota Editor

ಮಲೆನಾಡಿನಲ್ಲಿ ಬರದ ಛಾಯೆ : ರೈತರ ಕೃಷಿ ಸಾಲ ಮನ್ನಾಕ್ಕೆ ಒತ್ತಾಯ

JanaNota Editor