ಜನ ನೋಟ
ರಾಜ್ಯ

ಸಿದ್ದರಾಮಯ್ಯ ಮೇಲಿನ ಅಭಿಮಾನಕ್ಕೆ ಮಗುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ

ಬೀದರ್ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನ ಹಾಗೂ ಅವರು ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಿಂದ ಪ್ರೇರಿತರಾದ ದಂಪತಿಯೊಬ್ಬರು ತಮ್ಮ 15 ದಿನಗಳ ಗಂಡು ಮಗುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ ಮಾಡಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಗುಲಗುಂಡಿ ಗ್ರಾಮದ ರಾಜಪ್ಪ ಮತ್ತು ಅಂಬಿಕಾ ದಂಪತಿ ತಮ್ಮ ಮಗುವಿಗೆ ವಿಭಿನ್ನ ಹಾಗೂ ಅರ್ಥಪೂರ್ಣ ಹೆಸರಿಡುವ ಮೂಲಕ ಗಮನ ಸೆಳೆದಿದ್ದಾರೆ.

ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಜಾರಿಗೆ ಬಂದ ಅನ್ನಭಾಗ್ಯ ಯೋಜನೆಯು ಬಡ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸುವ ಉದ್ದೇಶ ಹೊಂದಿದೆ. ಈ ಯೋಜನೆಯಿಂದ ಪ್ರೇರಿತರಾದ ದಂಪತಿ, ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನವನ್ನು ವಿಭಿನ್ನವಾಗಿ ವ್ಯಕ್ತಪಡಿಸಲು ನಿರ್ಧರಿಸಿದ್ದರು.

ಅನ್ನಭಾಗ್ಯ ಯೋಜನೆಯ ‘ಅನ್ನ’ ಪದ ಹಾಗೂ ಸಿದ್ದರಾಮಯ್ಯ ಅವರ ಹೆಸರಿನ ‘ರಾಮಯ್ಯ’ ಪದವನ್ನು ಸೇರಿಸಿ ಮಗುವಿಗೆ ‘ಅನ್ನರಾಮಯ್ಯ’ ಎಂದು ಹೆಸರಿಟ್ಟಿದ್ದಾರೆ.

ವಿಶೇಷವೆಂದರೆ, ಮಗುವಿನ ಜನನಕ್ಕೂ ಮುನ್ನವೇ ದಂಪತಿ ನಾಮಕರಣದ ಬಗ್ಗೆ ನಿರ್ಧಾರ ಕೈಗೊಂಡಿದ್ದರು. ಹೆಣ್ಣು ಮಗುವಾದರೆ ‘ಪಾರ್ವತಿರಾಮಯ್ಯ’ ಹಾಗೂ ಗಂಡು ಮಗುವಾದರೆ ‘ಅನ್ನರಾಮಯ್ಯ’ ಎಂದು ಹೆಸರಿಡಲು ತೀರ್ಮಾನಿಸಿದ್ದರು. ಅದರಂತೆ ಗಂಡು ಮಗು ಜನಿಸಿದ ಹಿನ್ನೆಲೆಯಲ್ಲಿ ತಮ್ಮ ನಿರ್ಧಾರದಂತೆ ನಾಮಕರಣ ನೆರವೇರಿಸಿದ್ದಾರೆ.

ರಾಜಪ್ಪ ಮತ್ತು ಅಂಬಿಕಾ ದಂಪತಿಯ ಈ ವಿಭಿನ್ನ ನಾಮಕರಣದ ಸುದ್ದಿ ಇದೀಗ ದುಗುಲಗುಂಡಿ ಗ್ರಾಮ ಸೇರಿದಂತೆ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ.

Related posts

ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

JanaNota Editor

ಗ್ರಾಮ ಪಂಚಾಯಿತಿ, ತಾಪಂ, ಜಿಪಂ ಚುನಾವಣೆ ಶೀಘ್ರದಲ್ಲೇ? ಸಚಿವ ಸವದಿ ಮಹತ್ವದ ಹೇಳಿಕೆ

JanaNota Editor

ಕೌಟುಂಬಿಕ ಕಲಹ : ಹೆತ್ತ ಮಕ್ಕಳನೇ ಕಾಲುವೆ ಗೆ ಎಸೆದ ತಂದೆ

JanaNota Editor