ಜನ ನೋಟ
ರಾಜ್ಯ

ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ದಿಢೀರ್ ರಾಜಿನಾಮೆ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ KPCC ಮಹಿಳಾ ಘಟಕದ ಅಧ್ಯಕ್ಷರಾಗಿದ್ದ ಸೌಮ್ಯಾ ರೆಡ್ಡಿ ಇಂದು ದಿಢೀರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

2026ರ ಆಗಸ್ಟ್ 20ರಂದೇ ತಮ್ಮ ರಾಜಿನಾಮೆ ಪತ್ರವನ್ನು ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರವಾನಿಸಿದ್ದಾರೆ. ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಮಹಿಳೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಹೀಗಾಗಿ ಹೈಕಮಾಂಡ್ ಗಮನ ಸೆಳೆಯಲು ಮುಂದಾಗಿದ್ದು ತಮ್ಮ ರಾಜಿನಾಮೆ ಪತ್ರದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

KPCC ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡುವವರೆಗೂ ಆ ಸ್ಥಾನದಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಇನ್ನು ಮುಂದಿನ ರಾಜ್ಯ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ನನ್ನ ಜವಾಬ್ದಾರಿಗಳನ್ನು ಮುಂದುವರೆಸಿಕೊಂಡು ಹೋಗಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ.

Related posts

ರಾಜ್ಯದಲ್ಲಿ ಹಾಲು ಮತ್ತು ಬಸ್‌ ಟಿಕೆಟ್‌ ದರ ಏರಿಕೆ ಫಿಕ್ಸ್ : ದರ ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ

JanaNota Editor

ಅ.13ರಂದು ನಟ ಪ್ರಭುದೇವರಿಂದ ಯುವ ದಸರಾ ಉದ್ಘಾಟನೆ

JanaNota Editor

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

JanaNota Editor