ಜನ ನೋಟ
ಶಿವಮೊಗ್ಗ

ರಿಪ್ಪನ್‌ಪೇಟೆ ಸುತ್ತಮುತ್ತ ಚಿರತೆ ಆತಂಕ : ದಾಳಿಗೆ ಹಸು ಬಲಿ, ಗ್ರಾಮಸ್ಥರಲ್ಲಿ ಭೀತಿ

ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಚಿರತೆ ದಾಳಿಯಿಂದ ಹಸುವೊಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮನೆಮಾಡಿದೆ.

ಕಾರೆಹೊಂಡ ಗ್ರಾಮದ ದಿನೇಶ್ ಎಂಬುವವರಿಗೆ ಸೇರಿದ ಹಸು ಚಿರತೆ ದಾಳಿಗೆ ಬಲಿಯಾಗಿದೆ ಎನ್ನಲಾಗಿದೆ. ಜಾನುವಾರುಗಳನ್ನು ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆದಿದ್ದು, ಸೋಮವಾರ ಮಧ್ಯಾಹ್ನ ಸಂಭವಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

ಘಟನೆ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಸುವಿನ ಸಾವಿಗೆ ಚಿರತೆ ದಾಳಿಯೇ ಕಾರಣವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮುಂದಾಗಿದ್ದಾರೆ.

ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆಗಳ ಸಂಚಾರದ ಬಗ್ಗೆ ಆತಂಕ ಹೆಚ್ಚಾಗಿದೆ. ಜಾನುವಾರುಗಳನ್ನು ಮೇಯಿಸಲು ಕರೆದೊಯ್ಯುವ ರೈತರು ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ, ಚಿರತೆ ಸಂಚಾರದ ಬಗ್ಗೆ ನಿಗಾ ವಹಿಸಬೇಕು ಹಾಗೂ ಗ್ರಾಮಸ್ಥರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ನಿರೀಕ್ಷೆ ಸ್ಥಳೀಯರಲ್ಲಿದೆ.

Related posts

ಶಿವಮೊಗ್ಗ: ಮಧ್ವಾಚಾರ್ಯರ ಜಯಂತಿ ಸರ್ಕಾರಿ ಆಚರಣೆಗೆ ಆದೇಶ: ಪ್ರಸನ್ನ ಕುಮಾರ್

JanaNota Editor

ಹಬ್ಬದ ಪ್ರಯಾಣಿಕರಿಗೆ ಸಿಹಿಸುದ್ದಿ: ತಾಳಗುಪ್ಪದವರೆಗೆ ಯಶವಂತಪುರ ಎಕ್ಸ್‌ಪ್ರೆಸ್ ವಿಸ್ತರಣೆ

JanaNota Editor

ದಿನ ಭವಿಷ್ಯ 14-08-2026

JanaNota Editor