ಜನ ನೋಟ
ರಾಜ್ಯ

ಡಿಸಿಎಂ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಡಾ.ಜಿ. ಪರಮೇಶ್ವರ್​​ ದಾಖಲು

ಬೆಂಗಳೂರು : ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಎಂ ಡಿಕೆ ಶಿವಕುಮಾರ್​​, ಆರೋಗ್ಯ ಸಚಿವ ಯು.ಟಿ. ಖಾದರ್​​, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರದಂತೆ ಸಚಿವರು, ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಪರಮೇಶ್ವರ್​​ ಆರೋಗ್ಯ ವಿಚಾರಿಸಿದ್ದಾರೆ. ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಗೆ ಬೇಟಿ ಬಳಿಕ ಸಚಿವ ಯು.ಟಿ. ಖಾದರ್​​ ಮಾಹಿತಿ ನೀಡಿದ್ದಾರೆ.

ಡಿಸಿಎಂಗೆ ಹೃದಯ ಸಂಬಂಧಿ ಸಮಸ್ಯೆ ಎಂಬ ಮಾಹಿತಿ

ವಸಂತನಗರದ ಬ್ಯಾಡ್ಮಿಂಟನ್ ಅಸೋಸಿಯೇಷನ್​​​ನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಇಂಟರ್​​ನ್ಯಾಷನಲ್​​ ಚಾಲೆಂಜ್ ಉದ್ಘಾಟನಾ ಸಮಾರಂಭದಲ್ಲಿ ಪರಮೇಶ್ವರ್​​ ಭಾಗಿಯಾಗಿದ್ದರು. ಆಟಗಾರರಿಗೆ ಶುಭಾಷಯವನ್ನೂ ಹೇಳಿದ್ದರು.

ಈ ವೇಳೆಯೇ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್​​ ಅವರು ಬರುವ ಮುಂಚೆಯೇ ಅವರು ಅಲ್ಲಿಂದ ತೆರಳಿದ್ದರು. ಬೆಳಿಗ್ಗೆಯಿಂದಲೇ ಅವರಿಗೆ ಸುಸ್ತಿನ ಅನುಭವವಾಗಿತ್ತು. ಡಿಸಿಎಂಗೆ ಹೃದಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಆಗಿದೆ ಎಂಬ ಮಾಹಿತಿ ಇದ್ದು,  ಅವರನ್ನು ಎಲ್ಲ ರೀತಿಯಿಂದಲೂ ವೈದ್ಯರು ಪರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ.

Related posts

ಚಿಕ್ಕಮಗಳೂರಲ್ಲಿ ‌ನಕಲಿ ನಾಟಿ ತುಪ್ಪ ತಯಾರಿ ಜಾಲ ಪತ್ತೆ: ರಾಶಿ ರಾಶಿ ರಾಸಾಯನಿಕ ಕಂಡು ಅಧಿಕಾರಿಗಳೇ ದಂಗು

JanaNota Editor

ದುರ್ಗಾ ಮಾತೆಯ ಮೂರ್ತಿ ತರುವಾಗ ಭೀಕರ ರಸ್ತೆ ಅಪಘಾತ; ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಸಾವು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

JanaNota Editor

ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು

JanaNota Editor